ಟಿ20 ಕೆರಿಯರ್ನಲ್ಲೇ ಅತ್ಯಂತ ದುಬಾರಿ ಸ್ಪೆಲ್ ಎಸೆದ ಜಸ್ಪ್ರೀತ್ ಬುಮ್ರಾ
Jasprit Bumrah: ಜಸ್ಪ್ರೀತ್ ಬುಮ್ರಾ ಟೀಮ್ ಇಂಡಿಯಾ ಪರ ಈವರೆಗೆ 87 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರು ಪಡೆದಿರುವ ಒಟ್ಟು ವಿಕೆಟ್ಗಳ ಸಂಖ್ಯೆ 107. ಇದಾಗ್ಯೂ ಅವರು ಒಮ್ಮೆಯೂ 5 ವಿಕೆಟ್ಗಳ ಸಾಧನೆ ಮಾಡಿಲ್ಲ ಎಂಬುದು ವಿಶೇಷ. ಅಷ್ಟೇ ಅಲ್ಲದೆ ಒಂದೇ ಒಂದು ಪಂದ್ಯದಲ್ಲಿ ಅವರು 4 ವಿಕೆಟ್ಗಳ ಗೊಂಚಲನ್ನು ಸಹ ಪಡೆದಿಲ್ಲ.
Updated on: Feb 01, 2026 | 2:09 PM

ಜಸ್ಪ್ರೀತ್ ಬುಮ್ರಾ (Jasprit Bumrah) ಟಿ20 ಕೆರಿಯರ್ ಆರಂಭಿಸಿ ಬರೋಬ್ಬರಿ 13 ವರ್ಷಗಳಾಗಿವೆ. ಈ ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬುಮ್ರಾ ಅತ್ಯಂತ ದುಬಾರಿ ಸ್ಪೆಲ್ ಎಸೆದಿದ್ದಾರೆ. ಅದು ಸಹ ಒಂದೇ ಒಂದು ವಿಕೆಟ್ ಕಬಳಿಸದೇ ಎಂಬುದೇ ಅಚ್ಚರಿ.

ತಿರುವನಂತಪುರದ ಗ್ರೀನ್ಫೀಲ್ಡ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ 4 ಓವರ್ಗಳನ್ನು ಎಸೆದ ಜಸ್ಪ್ರೀತ್ ಬುಮ್ರಾ ನೀಡಿದ್ದು ಬರೋಬ್ಬರಿ 58 ರನ್ಗಳು. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿರಲಿಲ್ಲ.

ಇದು ಜಸ್ಪ್ರೀತ್ ಬುಮ್ರಾ ಅವರ ಕೆರಿಯರ್ನಲ್ಲೇ ಅತ್ಯಂತ ದುಬಾರಿ ಸ್ಪೆಲ್. ಅಂದರೆ 4 ಓವರ್ಗಳಲ್ಲಿ ಇದೇ ಮೊದಲ ಬಾರಿಗೆ ಬುಮ್ರಾ ಒಂದೇ ಒಂದು ವಿಕೆಟ್ ಪಡೆಯದೇ 50 ಕ್ಕಿಂತ ಹೆಚ್ಚು ರನ್ ಬಿಟ್ಟು ಕೊಟ್ಟಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಅವರು ಆಸ್ಟ್ರೇಲಿಯಾ ವಿರುದ್ಧ 4 ಓವರ್ಗಳಲ್ಲಿ 50 ರನ್ ಚಚ್ಚಿಸಿಕೊಂಡಿದ್ದರು.

ಹಾಗೆಯೇ 2021 ರ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಜಸ್ಪ್ರೀತ್ ಬುಮ್ರಾ 4 ಓವರ್ಗಳಲ್ಲಿ 56 ರನ್ ನೀಡಿ 1 ವಿಕೆಟ್ ಪಡೆದಿದ್ದರು. ಇದು ಬುಮ್ರಾ ಟಿ20 ಕೆರಿಯರ್ನಲ್ಲೇ ಅವರ ಅತ್ಯಂತ ದುಬಾರಿ ಸ್ಪೆಲ್ ಆಗಿತ್ತು. ಇದಾದ ಬಳಿಕ ಒಮ್ಮೆಯೂ ಅವರು ಐಪಿಎಲ್ನಲ್ಲಿ 50 ಕ್ಕಿಂತ ಹೆಚ್ಚು ರನ್ ನೀಡಿರಲಿಲ್ಲ.

ಆದರೆ ಇದೀಗ ಅಂತಾರಾಷ್ಟ್ರೀಯ ಪಂದ್ಯದಲ್ಲೇ 58 ರನ್ ಚಚ್ಚಿಸಿಕೊಂಡಿದ್ದಾರೆ. ಈ ಮೂಲಕ 13 ವರ್ಷಗಳ ಕೆರಿಯರ್ನಲ್ಲೇ ಅತ್ಯಂತ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಜಸ್ಪ್ರೀತ್ ಬುಮ್ರಾ ಅವರ ಈ ಕಳಪೆ ಪ್ರದರ್ಶನ ಇದೀಗ ಟೀಮ್ ಇಂಡಿಯಾದ ಚಿಂತೆಯನ್ನು ಹೆಚ್ಚಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



