AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬ್ಯಾಕ್​ಗೆ ಜಸ್​ಪ್ರೀತ್ ಬುಮ್ರಾ ರೆಡಿ

Jasprit Bumrah: ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಕೊನೆಯ ಇನಿಂಗ್ಸ್​ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಗುಳಿದಿದ್ದಾರೆ. ಇದೀಗ ಫಿಟ್​ನೆಸ್ ಕಸರತ್ತು ಆರಂಭಿಸಿರುವ ಬುಮ್ರಾ ಮಾರ್ಚ್​ನಲ್ಲಿ ಕಂಬ್ಯಾಕ್ ಮಾಡಲಿದ್ದಾರೆ.

ಝಾಹಿರ್ ಯೂಸುಫ್
|

Updated on: Feb 22, 2025 | 9:04 AM

Share
ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ವೇಳೆ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ ಬುಮ್ರಾ ಆ ಬಳಿಕ ಭಾರತದ ಪರ ಯಾವುದೇ ಪಂದ್ಯವಾಡಿಲ್ಲ. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವ ನಿರೀಕ್ಷೆಯಿತ್ತು.

1 / 5
ಆದರೆ ವೈದ್ಯಕೀಯ ವರದಿಯಲ್ಲಿ ಅವರು ಗಾಯದಿಂದ ಗುಣಮುಖರಾಗಲು ಹೆಚ್ಚಿನ ವಿಶ್ರಾಂತಿಯ ಅಗತ್ಯತೆಯನ್ನು ಸೂಚಿಸಲಾಗಿತ್ತು. ಹೀಗಾಗಿ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ವೈದ್ಯಕೀಯ ಮೇಲ್ವಿಚಾರಣೆಯೊಂದಿಗೆ ಜಸ್​ಪ್ರೀತ್ ಬುಮ್ರಾ ಫಿಟ್​ನೆಸ್ ಕಸರತ್ತು ಆರಂಭಿಸಿದ್ದಾರೆ.

2 / 5
ಈ ಕಸರತ್ತಿನೊಂದಿಗೆ ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್​ಗೆ ರೆಡಿಯಾಗುತ್ತಿದ್ದಾರೆ. ಅದರಂತೆ ಮುಂಬರುವ ಐಪಿಎಲ​್​ನಲ್ಲಿ ಯಾರ್ಕರ್ ಸ್ಪೆಷಲಿಸ್ಟ್ ಮತ್ತೆ ಮೈದಾನಕ್ಕಿಳಿಯುವುದು ಖಚಿತ. ಅಂದರೆ ಮಾರ್ಚ್ 23 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಬುಮ್ರಾ ವಾಪಸಾತಿ ಮಾಡಲಿದ್ದಾರೆ.

3 / 5
ಇನ್ನು ಚಾಂಪಿಯನ್ಸ್ ಟ್ರೋಫಿಗೆ ಜಸ್​ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಯುವ ವೇಗಿ ಹರ್ಷಿತ್ ರಾಣಾ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ರಾಣಾ 7.4 ಓವರ್​ಗಳಲ್ಲಿ 31 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

4 / 5
ಹೀಗಾಗಿ ಫೆಬ್ರವರಿ 23 ರಂದು ನಡೆಯಲಿರುವ ಪಾಕಿಸ್ತಾನ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಹಾಗೂ ಹರ್ಷಿತ್ ರಾಣಾ ಟೀಮ್ ಇಂಡಿಯಾದ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ ಎನ್ನಬಹುದು. ಇನ್ನು ಮೂರನೇ ವೇಗಿಯಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ಅರ್ಷದೀಪ್ ಸಿಂಗ್​ಗೆ ಆಡುವ ಬಳಗದಲ್ಲಿ ಸ್ಥಾನ ನೀಡಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ