
ಮಹಿಳಾ ಕ್ರಿಕೆಟ್‌ನ ದಿಗ್ಗಜ ಬೌಲರ್ ಜೂಲನ್ ಗೋಸ್ವಾಮಿ ಮೈದಾನಕ್ಕೆ ಬಂದಾಗಲೆಲ್ಲಾ ತಮ್ಮ ಹೆಸರಿನಲ್ಲಿ ಕೆಲವು ದಾಖಲೆಗಳನ್ನು ಮಾಡುತ್ತಾರೆ. ಮಹಿಳಾ ವಿಶ್ವಕಪ್‌ನ 15ನೇ ಪಂದ್ಯದಲ್ಲಿ ಜೂಲನ್ ಗೋಸ್ವಾಮಿ ಇದೇ ರೀತಿಯ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೂಲನ್ ಟ್ಯಾಮಿ ಬ್ಯೂಮಾಂಟ್ ಅವರನ್ನು ಔಟ್ ಮಾಡಿದ ತಕ್ಷಣ, ಅವರು ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳನ್ನು ಪೂರೈಸಿದರು.

ಮಹಿಳಾ ಕ್ರಿಕೆಟ್‌ನಲ್ಲಿ ಜೂಲನ್ ಗೋಸ್ವಾಮಿ ಹೊರತುಪಡಿಸಿ, ಏಕದಿನ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳನ್ನು ಗಳಿಸಲು ಯಾವುದೇ ಬೌಲರ್‌ಗೆ ಸಾಧ್ಯವಾಗಿಲ್ಲ. ಅವರ ನಂತರ ಆಸ್ಟ್ರೇಲಿಯಾದ ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ 180 ವಿಕೆಟ್‌ಗಳನ್ನು ಪಡೆದಿದ್ದಾರೆ. ವೆಸ್ಟ್ ಇಂಡೀಸ್‌ನ ಅನಿಸಾ ಮೊಹಮ್ಮದ್ ಅವರ ಹೆಸರಿನಲ್ಲಿ 180 ವಿಕೆಟ್‌ಗಳಿವೆ.


