IND vs ENG: ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ವಿಶೇಷ ಮೈಲಿಗಲ್ಲು ದಾಟಿದ ಜೋ ರೂಟ್

Updated on: Jul 13, 2025 | 10:42 PM

Joe Root's Historic Feat: ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್ ಜೋ ರೂಟ್ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಆಡುತ್ತಾ 8000 ರನ್‌ಗಳ ಮೈಲುಗಲ್ಲನ್ನು ತಲುಪಿದ್ದಾರೆ. ಭಾರತದ ವಿರುದ್ಧ 11 ಶತಕಗಳನ್ನು ಬಾರಿಸಿ ಸ್ಟೀವ್ ಸ್ಮಿತ್ ಅವರನ್ನು ಮೀರಿಸಿದ್ದಾರೆ.

1 / 7
ಇಂಗ್ಲೆಂಡ್‌ನ ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್ ಪ್ರಸ್ತುತ ಟೀಂ ಇಂಡಿಯಾ ವಿರುದ್ಧ ನಡೆಯುತ್ತಿರುವ ಟೆಸ್ಡ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಈ ಸರಣಿ ಮಾತ್ರವಲ್ಲ, ರೂಟ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾವಾಗಲೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ತಮ್ಮ ಹೆಸರಿನಲ್ಲಿ ಅನೇಕ ದಾಖಲೆಗಳನ್ನು ನಿರ್ಮಿಸಿದ್ದಾರೆ.

2 / 7
ಭಾರತದ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ರೂಟ್ ಮತ್ತೊಂದು ಸಾಧನೆ ಮಾಡಿದರು. ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸಿದ್ದ ರೂಟ್, 2ನೇ ಇನ್ನಿಂಗ್ಸ್​ನಲ್ಲಿ 40 ರನ್ ಬಾರಿಸುವ ಮೂಲಕ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 8000 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು ಪೂರ್ಣಗೊಳಿಸಿದರು. ಜೋ ರೂಟ್‌ಗಿಂತ ಮೊದಲು ಈ ದಾಖಲೆಯನ್ನು ಕೇವಲ ಮೂವರು ಆಟಗಾರರು ಮಾತ್ರ ಮಾಡಿದ್ದರು.

3 / 7
ಜೋ ರೂಟ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಇದೀಗ 8000 ಅಥವಾ ಅದಕ್ಕಿಂತ ಹೆಚ್ಚು ರನ್ ದಾಖಲಿಸಿದ್ದಾರೆ. ಜೋ ರೂಟ್‌ಗಿಂತ ಮೊದಲು, ಈ ಸಾಧನೆಯನ್ನು ಭಾರತದ ಸಚಿನ್ ತೆಂಡೂಲ್ಕರ್, ಶ್ರೀಲಂಕಾದ ಮಹೇಲಾ ಜಯವರ್ಧನೆ ಮತ್ತು ದಕ್ಷಿಣ ಆಫ್ರಿಕಾದ ಜಾಕ್ವೆಸ್ ಕಾಲಿಸ್ ಮಾತ್ರ ಮಾಡಿದ್ದರು.

4 / 7
ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜೋ ರೂಟ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಅವರು 28 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 53 ರನ್ (ಅಜೇಯ) ಕೊಡುಗೆ ನೀಡಿದರು. ಅವರ ಇನ್ನಿಂಗ್ಸ್ ಬಹಳ ಮುಖ್ಯವಾಗಿತ್ತು.

5 / 7
ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ರೂಟ್ 104 ರನ್‌ಗಳ ಕೊಡುಗೆ ನೀಡಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ 40 ರನ್‌ಗಳ ಇನ್ನಿಂಗ್ಸ್ ಆಡಿದರು. ಜೋ ರೂಟ್ ಈ ಸರಣಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಇದುವರೆಗೆ 50.60 ಸರಾಸರಿಯಲ್ಲಿ 253 ರನ್ ಗಳಿಸಿದ್ದಾರೆ.

6 / 7
ಲಾರ್ಡ್ಸ್‌ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಶತಕ ಬಾರಿಸಿದ ರೂಟ್ ಟೀಂ ಇಂಡಿಯಾ ವಿರುದ್ಧ 11 ಶತಕ ಬಾರಿಸಿದ ದಾಖಲೆ ನಿರ್ಮಿಸಿದರು. ಈ ಮೂಲಕ ಭಾರತದ ವಿರುದ್ಧ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಜೋ ರೂಟ್ ಸ್ಟೀವ್ ಸ್ಮಿತ್ ಅವರನ್ನು ಸರಿಗಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ರೂಟ್ 37 ಶತಕ ಬಾರಿಸಿದ್ದು, ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರಲ್ಲಿ ಕುಮಾರ್ ಸಂಗಕ್ಕಾರ, ರಿಕಿ ಪಾಂಟಿಂಗ್, ಜಾಕ್ವೆಸ್ ಕಾಲಿಸ್ ಮತ್ತು ಸಚಿನ್ ತೆಂಡೂಲ್ಕರ್ ಸೇರಿದ್ದಾರೆ.

7 / 7
ಸಚಿನ್ ತೆಂಡೂಲ್ಕರ್ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ 50 ಕ್ಕೂ ಹೆಚ್ಚು ರನ್ ಗಳಿಸಿದ ಆಟಗಾರ ಜೋ ರೂಟ್ ಆಗಿದ್ದಾರೆ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 103 ಬಾರಿ 50+ ರನ್ ಬಾರಿಸಿದ್ದಾರೆ. ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 156 ಪಂದ್ಯಗಳಲ್ಲಿ 50.8 ಸರಾಸರಿಯಲ್ಲಿ 13259 ರನ್ ಗಳಿಸಿದ್ದಾರೆ.