Joe Root: ಟಾಪ್​-5 ಗೆ ಜೋ ರೂಟ್ ಎಂಟ್ರಿ

Joe Root Records: ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಇಂಗ್ಲೆಂಡ್ ಬ್ಯಾಟ್ಸ್​ಮನ್ ಜೋ ರೂಟ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 219 ಎಸೆತಗಳಲ್ಲಿ ಸೆಂಚುರಿ ಪೂರೈಸುವುದರೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ವಿಶೇಷ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದರು. ಇದರ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 19 ಸಾವಿರ ರನ್ ಪೂರೈಸಿದರು.

TV9 Web
| Updated By: ಝಾಹಿರ್ ಯೂಸುಫ್

Updated on: Feb 24, 2024 | 8:41 AM

ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಆಕರ್ಷಕ ಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಮೂಲಕ 219 ಎಸೆತಗಳಲ್ಲಿ ಶತಕ ಪೂರೈಸಿದರು.

1 / 7
ಈ ಶತಕದೊಂದಿಗೆ ಜೋ ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 19 ಸಾವಿರ ರನ್​ ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಾಗೆಯೇ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 19000 ರನ್ ಕಲೆಹಾಕಿದ ವಿಶ್ವದ 5ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 7
ಜೋ ರೂಟ್ 444 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದು, ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 19 ಸಾವಿರ ರನ್ ಕಲೆಹಾಕಿದ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಈ ದಾಖಲೆ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಅಲಂಕರಿಸಿದ್ದಾರೆ.

3 / 7
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 19 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಕೇವಲ 399 ಇನಿಂಗ್ಸ್​ಗಳ ಮೂಲಕ ಈ ಸಾಧನೆ ಮಾಡಿದ್ದರು. ಅಲ್ಲದೆ 400 ಕ್ಕಿಂತ ಕಡಿಮೆ ಇನಿಂಗ್ಸ್​ಗಳಲ್ಲಿ 19 ಸಾವಿರ ರನ್ ಪೂರೈಸಿದ ಏಕೈಕ ಬ್ಯಾಟರ್ ವಿರಾಟ್ ಕೊಹ್ಲಿ ಎಂಬುದು ವಿಶೇಷ.

4 / 7
ದ್ವಿತೀಯ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇದ್ದು, ಕ್ರಿಕೆಟ್ ದೇವರು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 19 ಸಾವಿರ ರನ್ ಪೂರೈಸಲು ಬರೋಬ್ಬರಿ 432 ಇನಿಂಗ್ಸ್ ಆಡಿದ್ದರು.

5 / 7
ಇನ್ನು ಮೂರನೇ ಸ್ಥಾನದಲ್ಲಿ ಲೆಜೆಂಡ್ ಬ್ರಿಯಾನ್ ಲಾರಾ ಇದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟಿಗ ಲಾರಾ ಈ ಸಾಧನೆ ಮಾಡಲು 433 ಇನಿಂಗ್ಸ್​ ತೆಗೆದುಕೊಂಡಿದ್ದಾರೆ. ಹಾಗೆಯೇ 444 ಇನಿಂಗ್ಸ್​ಗಳಲ್ಲಿ 19 ಸಾವಿರ ರನ್ ಪೂರೈಸಿರುವ ರಿಕಿ ಪಾಂಟಿಂಗ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

6 / 7
ಇದೀಗ 444 ಇನಿಂಗ್ಸ್​ಗಳ ಮೂಲಕವೇ ಜೋ ರೂಟ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 19 ಸಾವಿರ ರನ್ ಕಲೆಹಾಕಿದ್ದಾರೆ. ಈ ಮೂಲಕ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ 5ನೇ ಬ್ಯಾಟರ್ ಹಾಗೂ ಇಂಗ್ಲೆಂಡ್​ನ ಮೊದಲ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

7 / 7
Follow us