ಬರೋಬ್ಬರಿ 27 ಬಾರಿ… ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್

Updated on: Jan 25, 2026 | 11:55 AM

Sri Lanka vs England: ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 49.3 ಓವರ್​ಗಳಲ್ಲಿ 219 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 46.2 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 223 ರನ್​ಗಳಿಸಿ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

1 / 5
ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೆವಿನ್ ಪೀಟರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆ ಮುರಿಯುವ ಮೂಲಕ. ಅಂದರೆ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆ ರೂಟ್ ಪಾಲಾಗಿದೆ.

2 / 5
ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ ಶ್ರೀಲಂಕಾ ನೀಡಿದ 220 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ಪರ ರೂಟ್ 90 ಎಸೆತಗಳಲ್ಲಿ 75 ರನ್ ಬಾರಿಸಿದ್ದರು.

3 / 5
ಅಷ್ಟೇ ಅಲ್ಲದೆ ಇದಕ್ಕೂ ಮುನ್ನ ಬೌಲಿಂಗ್​ನಲ್ಲಿ 2.3 ಓವರ್​ಗಳಲ್ಲಿ 13 ರನ್ ನೀಡಿ 2 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಇಂಗ್ಲೆಂಡ್ ಗೆಲುವಿನಲ್ಲಿ  ರೂಟ್ ಪ್ರಮುಖ ಪಾತ್ರವಹಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಜೋ ರೂಟ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿದಿದೆ.

4 / 5
ಇದರೊಂದಿಗೆ ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಕೆವಿನ್ ಪೀಟರ್ಸನ್ ಹೆಸರಿನಲ್ಲಿತ್ತು. ಇಂಗ್ಲೆಂಡ್ ಪರ 277 ಪಂದ್ಯಗಳನ್ನಾಡಿರುವ ಪೀಟರ್ಸನ್ ಒಟ್ಟು 26 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದರು.

5 / 5
ಇದೀಗ ಜೋ ರೂಟ್ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇಂಗ್ಲೆಂಡ್ ಪರ ಈವರೆಗೆ 383 ಪಂದ್ಯಗಳನ್ನಾಡಿರುವ ರೂಟ್ ಒಟ್ಟು 27 ಬಾರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.