ಚೆಂಡು ಹಿಡಿದು ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್

Updated on: Jul 12, 2025 | 10:54 AM

Joe Root World Record: ಟೆಸ್ಟ್ ಕ್ರಿಕೆಟ್​ನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಜೋ ರೂಟ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಇದೀಗ ಫೀಲ್ಡಿಂಗ್ ಮೂಲಕ ಕೂಡ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಲೆಜೆಂಡ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದೇ ಅಚ್ಚರಿ.

1 / 5
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 200+ ಕ್ಯಾಚ್​ಗಳನ್ನು ಹಿಡಿದಿರುವುದು ಕೇವಲ 4 ಆಟಗಾರರು ಮಾತ್ರ. ಈ ಪಟ್ಟಿಯಲ್ಲಿ ಇದೀಗ ಇಂಗ್ಲೆಂಡ್ ಆಟಗಾರ ಜೋ ರೂಟ್ (Joe Root)  ಅಗ್ರಸ್ಥಾನಕ್ಕೇರಿದ್ದಾರೆ. ಅದು ಕೂಡ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಟೀಮ್ ಇಂಡಿಯಾ ಬ್ಯಾಟರ್ ಕರುಣ್ ನಾಯರ್ ಅವರ ಕ್ಯಾಚ್ ಹಿಡಿದಿದ್ದರು. ಈ ಕ್ಯಾಚ್​ನೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ವಿಶ್ವ ದಾಖಲೆ ಜೋ ರೂಟ್ ಪಾಲಾಯಿತು.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. 301 ಟೆಸ್ಟ್ ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿದ್ದ ದ್ರಾವಿಡ್ ಒಟ್ಟು 210 ಕ್ಯಾಚ್​ಗಳನ್ನು ಹಿಡಿದಿದು ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ.

4 / 5
ಜೋ ರೂಟ್ ಈವರೆಗೆ 156 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 296 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿದ್ದಾರೆ. ಇದೇ ವೇಳೆ ಅವರು ಹಿಡಿದ ಕ್ಯಾಚ್​ಗಳ ಸಂಖ್ಯೆ ಬರೋಬ್ಬರಿ 211* . ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಅತೀ ಹೆಚ್ಚು ಕ್ಯಾಚ್ ಹಿಡಿದ ಫೀಲ್ಡರ್ ಎಂಬ ವಿಶ್ವ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಕ್ಯಾಚ್ ಹಿಡಿದ ವಿಶ್ವ ದಾಖಲೆ ಇರುವುದು ಶ್ರೀಲಂಕಾ ತಂಡದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ (ಟಿ20+ಟೆಸ್ಟ್+ಏಕದಿನ) 768 ಇನಿಂಗ್ಸ್​ಗಳಲ್ಲಿ ಫೀಲ್ಡಿಂಗ್ ಮಾಡಿರುವ ಜಯವರ್ಧನೆ ಒಟ್ಟು 440 ಕ್ಯಾಚ್​ಗಳನ್ನು ಹಿಡಿದು ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.