ಹೊಸ ವಿಶ್ವ ದಾಖಲೆ ಬರೆದ ಜೋ ರೂಟ್​

Updated on: Aug 30, 2026 | 2:05 PM

Joe Root World Record: ಇಂಗ್ಲೆಂಡ್ ಕ್ರಿಕೆಟ್ ತಂಡದ ರನ್ ಮಷಿನ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಪಾಕಿಸ್ತಾನ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ಅದ್ಭುತ ಬ್ಯಾಟಿಂಗ್ ನಡೆಸಿದ ಅವರು, ಆಸ್ಟ್ರೇಲಿಯಾದ ದಿಗ್ಗಜ ಆಟಗಾರ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಐತಿಹಾಸಿಕ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಆಸ್ಟ್ರೇಲಿಯಾ ಲೆಜೆಂಡ್ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಐತಿಹಾಸಿಕ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. (PC: GettyImages)

ಇಂಗ್ಲೆಂಡ್ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಆಸ್ಟ್ರೇಲಿಯಾ ಲೆಜೆಂಡ್ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ಐತಿಹಾಸಿಕ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ. (PC: GettyImages)

2 / 5

ಲಂಡನ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಒಟ್ಟು 28 ರನ್​ ಕಲೆಹಾಕಿದ್ದಾರೆ. ಈ ಇಪ್ಪತ್ತೆಂಟು ರನ್​ಗಳೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ತವರಿನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್​ ಎಂಬ ವಿಶ್ವ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ. (PC: GettyImages)

3 / 5

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾದಲ್ಲಿ 154 ಟೆಸ್ಟ್ ಇನಿಂಗ್ಸ್ ಆಡಿದ್ದ ಪಾಂಟಿಂಗ್ ಒಟ್ಟು 7,578 ರನ್ ಕಲೆಹಾಕುವ ಮೂಲಕ, ತವರಿನಲ್ಲಿ ಅತ್ಯಧಿಕ ಟೆಸ್ಟ್ ರನ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. (PC: GettyImages)

4 / 5

ಇದೀಗ ಇಂಗ್ಲೆಂಡ್​ನಲ್ಲಿ 156 ಟೆಸ್ಟ್ ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 7,594 ರನ್ ಕಲೆಹಾಕಿದ್ದಾರೆ. ಈ ಮೂಲಕ ರಿಕಿ ಪಾಂಟಿಂಗ್ ಹೆಸರಿನಲ್ಲಿದ್ದ ದಾಖಲೆ ಮುರಿದು, ಸ್ವದೇಶಿ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದ್ದಾರೆ.  (PC: GettyImages)

5 / 5

ಪ್ರಸ್ತುತ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ದಾಖಲೆಯಲ್ಲಿ ಜೋ ರೂಟ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ (68 ಫಿಫ್ಟಿ) ಅವರೊಂದಿಗೆ ಜಂಟಿ ಅಗ್ರಸ್ಥಾನ ಹಂಚಿಕೊಂಡಿದ್ದಾರೆ. ಹೀಗಾಗಿ, ಮುಂಬರುವ ಪಂದ್ಯಗಳಲ್ಲಿ ರೂಟ್ ಬ್ಯಾಟ್‌ನಿಂದ ಮತ್ತೊಂದು ಅರ್ಧಶತಕ ಮೂಡಿಬಂದರೆ, ಅವರು ಸಚಿನ್ ದಾಖಲೆಯನ್ನು ಮೀರಿ ಮತ್ತೊಂದು ವಿಶ್ವ ದಾಖಲೆ ಬರೆಯಲಿದ್ದಾರೆ. (PC: GettyImages)

Loading...
Unable to load recommendations.
Follow Us