Joe Root: ಜೋ ರೂಟ್ ಸೆಂಚುರಿಗೆ ಹಿಟ್ಮ್ಯಾನ್ ದಾಖಲೆ ಬ್ರೇಕ್
Joe Root Records: ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 33 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಪ್ರಸ್ತುತ ಬ್ಯಾಟರ್ಗಳಲ್ಲಿ ಅತೀ ಹೆಚ್ಚು ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ಪರ ಟೆಸ್ಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.
Updated on: Aug 31, 2024 | 10:29 AM

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಜೋ ರೂಟ್ (Joe Root) ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ 206 ಎಸೆತಗಳಲ್ಲಿ 18 ಫೋರ್ಗಳೊಂದಿಗೆ 143 ರನ್ ಬಾರಿಸಿದ್ದರು.

ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಸಕ್ರಿಯ ಬ್ಯಾಟರ್ಗಳ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಸಹ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ಶತಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈವರೆಗೆ 483 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 509 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 48 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತ್ಯಧಿಕ ಶತಕ ಬಾರಿಸಿದ ಸಕ್ರಿಯ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಇದುವರೆಗೆ 348 ಪಂದ್ಯಗಳಲ್ಲಿ 454 ಇನಿಂಗ್ಸ್ ಆಡಿರುವ ಜೋ ರೂಟ್ 49 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಪ್ರಸ್ತುತ ಬ್ಯಾಟರ್ಗಳ ಪಟ್ಟಿಯಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ 2ನೇ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಪರ 533 ಪಂದ್ಯಗಳಲ್ಲಿ 591 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 80 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿರುವ ಸಕ್ರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಸಕ್ರಿಯ ಬ್ಯಾಟರ್ಗಳ ಪಟ್ಟಿಯಲ್ಲಿ ಜೋ ರೂಟ್ ಇದೀಗ ಅಗ್ರಸ್ಥಾನಕ್ಕೇರಿದ್ದಾರೆ. 264 ಇನಿಂಗ್ಸ್ಗಳಲ್ಲಿ 33 ಶತಕ ಬಾರಿಸಿ ರೂಟ್ ಈ ಸಾಧನೆ ಮಾಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ 32 ಸೆಂಚುರಿಗಳನ್ನು ಸಿಡಿಸಿರುವ ನ್ಯೂಝಿಲೆಂಡ್ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ನಂತರದ ಸ್ಥಾನಗಳಲಿದ್ದಾರೆ.
