Joe Root: ಜೋ ರೂಟ್ ಸೆಂಚುರಿಗೆ ಹಿಟ್​ಮ್ಯಾನ್ ದಾಖಲೆ ಬ್ರೇಕ್

|

Updated on: Aug 31, 2024 | 10:29 AM

Joe Root Records: ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 33 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಪ್ರಸ್ತುತ ಬ್ಯಾಟರ್​ಗಳಲ್ಲಿ ಅತೀ ಹೆಚ್ಚು ಟೆಸ್ಟ್ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ಪರ ಟೆಸ್ಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​ ಎಂಬ ದಾಖಲೆಯನ್ನು ಕೂಡ ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

1 / 6
ಲಾರ್ಡ್ಸ್​​ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಜೋ ರೂಟ್ (Joe Root) ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ 206 ಎಸೆತಗಳಲ್ಲಿ 18 ಫೋರ್​ಗಳೊಂದಿಗೆ 143 ರನ್ ಬಾರಿಸಿದ್ದರು.

2 / 6
ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಸಹ ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅವರ ಶತಕದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

3 / 6
ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಈವರೆಗೆ 483 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 509 ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ ಒಟ್ಟು 48 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅತ್ಯಧಿಕ ಶತಕ ಬಾರಿಸಿದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದರು.

4 / 6
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇದುವರೆಗೆ 348 ಪಂದ್ಯಗಳಲ್ಲಿ 454 ಇನಿಂಗ್ಸ್ ಆಡಿರುವ ಜೋ ರೂಟ್ 49 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಪ್ರಸ್ತುತ ಬ್ಯಾಟರ್​ಗಳ ಪಟ್ಟಿಯಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. ಟೀಮ್ ಇಂಡಿಯಾ ಪರ 533 ಪಂದ್ಯಗಳಲ್ಲಿ 591 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 80 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿರುವ ಸಕ್ರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 6
ವಿಶೇಷ ಎಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋ ರೂಟ್ ಇದೀಗ ಅಗ್ರಸ್ಥಾನಕ್ಕೇರಿದ್ದಾರೆ. 264 ಇನಿಂಗ್ಸ್​ಗಳಲ್ಲಿ 33 ಶತಕ ಬಾರಿಸಿ ರೂಟ್ ಈ ಸಾಧನೆ ಮಾಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ 32 ಸೆಂಚುರಿಗಳನ್ನು ಸಿಡಿಸಿರುವ ನ್ಯೂಝಿಲೆಂಡ್ ಕೇನ್ ವಿಲಿಯಮ್ಸನ್ ಹಾಗೂ ಆಸ್ಟ್ರೇಲಿಯಾ ಸ್ಟೀವ್ ಸ್ಮಿತ್ ನಂತರದ ಸ್ಥಾನಗಳಲಿದ್ದಾರೆ.