AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ವಿಶ್ವ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಜೋ ರೂಟ್

Joe Root: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 8 ವಿಕೆಟ್​​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​​ನಲ್ಲಿ ಅಜೇಯ 23 ರನ್​ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 01, 2024 | 10:41 AM

Share
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ಟೆಸ್ಟ್​ ಕ್ರಿಕೆಟ್​ನ ಸಾರ್ವಕಾಲಿಕ ದಾಖಲೆಯೊಂದು ಶೀಘ್ರದಲ್ಲೇ ಪತನಗೊಳ್ಳುವ ಮುನ್ಸೂಚನೆ ಸಿಗುತ್ತಿದೆ. ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್, ಸಚಿನ್ ಅವರ 'ಅತಿ ಹೆಚ್ಚು ಟೆಸ್ಟ್ ರನ್'ಗಳ ಬೃಹತ್ ವಿಶ್ವ ದಾಖಲೆಯನ್ನು ಅಳಿಸಿ ಹಾಕುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. (PC: Gettyimages)

1 / 5
ಜೋ ರೂಟ್ ಇನ್ನೆರಡು ವರ್ಷಗಳಲ್ಲಿ 14 ಟೆಸ್ಟ್ ಪಂದ್ಯಗಳನ್ನಾಡಲಿದ್ದಾರೆ. ಈ ಹದಿನಾಲ್ಕು ಟೆಸ್ಟ್ ಮ್ಯಾಚ್​ಗಳ ಮೂಲಕ ಒಟ್ಟು 28 ಇನಿಂಗ್ಸ್ ಆಡಲು ಅವಕಾಶ ದೊರೆಯಬಹುದು. ಈ ಇಪ್ಪತ್ತೆಂಟು ಇನಿಂಗ್ಸ್​ಗಳ ಮೂಲಕ ರೂಟ್  ಕೇವಲ 1,847 ರನ್‌ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. (PC: Gettyimages)

2 / 5
ಟೆಸ್ಟ್ ಕ್ರಿಕೆಟ್​ನಲ್ಲಿ 200 ಪಂದ್ಯಗಳಲ್ಲಿ 329 ಇನಿಂಗ್ಸ್​ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. (PC: Gettyimages)

3 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 165 ಪಂದ್ಯಗಳ 302 ಇನ್ನಿಂಗ್ಸ್‌ ಆಡಿರುವ ಜೋ ರೂಟ್ ಒಟ್ಟು 14,075 ರನ್ ಕಲೆಹಾಕಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಬಳಿಕ ಟೆಸ್ಟ್ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಮುಂದಿನ 14 ಟೆಸ್ಟ್ ಪಂದ್ಯಗಳ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ರೂಟ್​ಗೆ ಉತ್ತಮ ಅವಕಾಶವಿದೆ. (PC: Gettyimages)

4 / 5
ಅಂದರೆ 14 ಟೆಸ್ಟ್ ಪಂದ್ಯಗಳ 28 ಇನಿಂಗ್ಸ್​ಗಳ ಲೆಕ್ಕಾಚಾರ ತೆಗೆದುಕೊಂಡರೆ ಜೋ ರೂಟ್ 65 ರ ಸರಾಸರಿಯಲ್ಲಿ ರನ್ ಕಲೆಹಾಕಿದರೆ ಅಗ್ರಸ್ಥಾನಕ್ಕೇರಬಹುದು. ಒಂದು ವೇಳೆ ಜೋ ರೂಟ್ 2028 ರಲ್ಲೂ ಟೆಸ್ಟ್​ ಕ್ರಿಕೆಟ್​ನಲ್ಲಿ ಮುಂದುವರೆದರೆ ಸುಲಭವಾಗಿ ಸಚಿನ್ ತೆಂಡೂಲ್ಕರ್ ಅವರ ಬೃಹತ್ ರನ್​ಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರುವುದನ್ನು ಎದುರು ನೋಡಬಹುದು. (PC: Gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!

ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್

ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ

ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ

ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್

‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ

ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್

ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು

ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ