ಸಚಿನ್ ವಿಶ್ವ ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಿದ ಜೋ ರೂಟ್
Joe Root: ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಅಜೇಯ 23 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.
1 / 5
ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದೇ ವಿಶೇಷ.
2 / 5
ಕ್ರೈಸ್ಟ್ಚರ್ಚ್ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ 23 ರನ್ ಬಾರಿಸಿದ್ದರು. ಈ ಇಪ್ಪತ್ತಮೂರು ರನ್ಗಳೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 4ನೇ ಇನಿಂಗ್ಸ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡರು.
3 / 5
ಇದಕ್ಕೂ ಮುನ್ನ ಈ ವರ್ಲ್ಡ್ ರೆಕಾರ್ಡ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ನಾಲ್ಕನೇ ಇನಿಂಗ್ಸ್ನಲ್ಲಿ ಒಟ್ಟು 60 ಬಾರಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಒಟ್ಟು 1625 ರನ್ ಕಲೆಹಾಕುವ ಮೂಲಕ ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ.
4 / 5
ನಾಲ್ಕನೇ ಇನಿಂಗ್ಸ್ನಲ್ಲಿ 49 ಬಾರಿ ಬ್ಯಾಟಿಂಗ್ ಮಾಡಿರುವ ಜೋ ರೂಟ್ ಈವರೆಗೆ 1630 ರನ್ ಕಲೆಹಾಕಿದ್ದಾರೆ. ಈ ಮೂಲಕ 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ನಾಲ್ಕನೇ ಇನಿಂಗ್ಸ್ನಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದ್ದಾರೆ.
5 / 5
ಸದ್ಯ 150 ಟೆಸ್ಟ್ ಪಂದ್ಯಗಳ ಮೂಲಕ 12,777 ರನ್ ಕಲೆಹಾಕಿರುವ ಜೋ ರೂಟ್ ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದು, ಸಚಿನ್ ತೆಂಡೂಲ್ಕರ್ (15,921 ರನ್ಸ್) ಅವರ ವಿಶ್ವ ದಾಖಲೆ ಮುರಿಯಲು ಇನ್ನೂ 3144 ರನ್ಗಳ ಅವಶ್ಯಕತೆಯಿದೆ.