AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ವಿರುದ್ಧದ ಪಂದ್ಯದಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಜೋ ರೂಟ್

Joe Root world record: ಇಂಗ್ಲೆಂಡ್-ಪಾಕಿಸ್ತಾನ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಗೆಲುವಿನಂಚಿನಲ್ಲಿದೆ. ಪಾಕಿಸ್ತಾನ ಇನ್ನಿಂಗ್ಸ್ ಸೋಲಿನ ಭೀತಿಯಲ್ಲಿದೆ. ಈ ಪಂದ್ಯದಲ್ಲಿ ಜೋ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ರೂಟ್ 219 ಕ್ಯಾಚ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ರಾಹುಲ್ ದ್ರಾವಿಡ್ ಮೂರನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್ ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದೆ.

ಪೃಥ್ವಿಶಂಕರ
|

Updated on: Aug 21, 2026 | 8:09 PM

Share
ಮೂರು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿರುವ ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್‌ ತಂಡ ಸೋಲಿನ ಶಾಕ್ ನೀಡುವ ಸನಿಹದಲ್ಲಿದೆ. ಮೊದಲ ಇನ್ನಿಂಗ್ಸ್‌ನಲ್ಲಿ 171 ರನ್‌ಗಳಿಗೆ ಆಲೌಟ್ ಆಗಿದ್ದ ಪಾಕ್, ಇದೀಗ ಇನ್ನಿಂಗ್ಸ್ ಸೋಲಿನ ಅಂಚಿನಲ್ಲಿದೆ.

1 / 5
ಇತ್ತ ಇಂಗ್ಲೆಂಡ್ ಪರ ಬ್ಯಾಟಿಂಗ್ ಜೊತೆಗೆ ಫಿಲ್ಡಿಂಗ್​ನಲ್ಲಿಯೂ ಅಮೋಘ ಪ್ರದರ್ಶನ ನೀಡುತ್ತಿರುವ ತಂಡದ ಅನುಭವಿ ಆಟಗಾರ ಜೋ ರೂಟ್, ಈ ಟೆಸ್ಟ್ ಪಂದ್ಯದಲ್ಲಿ ವಿಶ್ವ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ. ಪಾಕ್ ತಂಡದ ಎರಡನೇ ಇನ್ನಿಂಗ್ಸ್​ನಲ್ಲಿ ಆರಂಭಿಕ ಆಟಗಾರ ಅಜಾನ್ ಅವೈಸ್ ಅವರ ಕ್ಯಾಚ್ ಹಿಡಿಯುವ ಮೂಲಕ ರೂಟ್ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ.

2 / 5
ಈ ಕ್ಯಾಚ್ ಮೂಲಕ ರೂಟ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ಆಟಗಾರನೆಂಬ ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಕ್ಯಾಚ್‌ಗಳನ್ನು ಹಿಡಿದ ಫೀಲ್ಡರ್​ಗಳ ಪಟ್ಟಿಯಲ್ಲಿ ರೂಟ್, ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಸ್ಟೀವ್ ಸ್ಮಿತ್ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ.

3 / 5
ರೂಟ್ 219 ಕ್ಯಾಚ್‌ಗಳನ್ನು ಹಿಡಿದಿದ್ದರೆ, ಸ್ಮಿತ್ 218 ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ 210 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾದ ಮಹೇಲಾ ಜಯವರ್ಧನೆ 205 ಮತ್ತು ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಜಾಕ್ವೆಸ್ ಕಾಲಿಸ್ 200 ಕ್ಯಾಚ್‌ಗಳನ್ನು ಹಿಡಿದು ನಂತರದ ಸ್ಥಾನಗಳಲ್ಲಿದ್ದಾರೆ.

4 / 5
ಇನ್ನು ಈ ಟೆಸ್ಟ್ ಪಂದ್ಯದ ಬಗ್ಗೆ ಹೇಳುವುದಾದರೆ.. ಆತಿಥೇಯ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್‌ನಲ್ಲಿ 409 ರನ್ ಗಳಿಸಿ 238 ರನ್‌ಗಳ ಮುನ್ನಡೆ ಸಾಧಿಸಿತು. ಇಂಗ್ಲೆಂಡ್‌ ಪರ ಹ್ಯಾರಿ ಬ್ರೂಕ್ 93 ಎಸೆತಗಳಲ್ಲಿ 91 ರನ್, ಜೋರ್ಡಾನ್ ಕಾಕ್ಸ್ 73 ರನ್, ನಾಯಕ ಜೋ ರೂಟ್ 66 ರನ್ ಮತ್ತು ಡಾನ್ ಲಾರೆನ್ಸ್ 51 ರನ್​ಗಳ ಇನ್ನಿಂಗ್ಸ್ ಆಡಿದರು.

5 / 5
Follow Us