ಫಿಫ್ಟಿ ಪ್ಲಸ್​​ನಲ್ಲಿ ಶತಕ ಪೂರೈಸಿದ ಜೋ ರೂಟ್

|

Updated on: Dec 08, 2024 | 7:29 AM

Joe Root Records: ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಇನಿಂಗ್ಸ್​ನಲ್ಲಿ ಜೋ ರೂಟ್ ಆಕರ್ಷಕ ಅರ್ಧಶತಕ ಬಾರಿಸಿದೆ. ಈ ಅರ್ಧಶತಕದೊಂದಿಗೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್ ಸ್ಕೋರ್ 350ರ ಗಡಿದಾಟಿದ್ದು, ಒಟ್ಟು ಮುನ್ನಡೆ 500 ರನ್​​ಗಳನ್ನು ದಾಟಿದೆ.

1 / 6
ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ 50+ ಸ್ಕೋರ್​ಗಳಿಸುವುದರಲ್ಲಿ ಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 6
ವೆಲ್ಲಿಂಗ್ಟನ್​​ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಜೋ ರೂಟ್ 76 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್​ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡರು.

3 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್. 1989 ರಿಂದ 2013ರ ನಡುವೆ 200 ಟೆಸ್ಟ್ ಪಂದ್ಯಗಳಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 119 ಬಾರಿ 50+ ಸ್ಕೋರ್​​ಗಳಿಸಿದ್ದಾರೆ.

4 / 6
ಸಚಿನ್ ನಂತರದ ಸ್ಥಾನಗಳಲ್ಲಿ ಜಾಕ್ಸ್ ಕಾಲಿಸ್ ಹಾಗೂ ರಿಕಿ ಪಾಂಟಿಂಗ್ ಇದ್ದಾರೆ. 1995 ರಿಂದ 2013 ರ ನಡುವೆ 280 ಟೆಸ್ಟ್ ಇನಿಂಗ್ಸ್ ಆಡಿರುವ ಜಾಕ್ಸ್ ಕಾಲಿಸ್ 103 ಬಾರಿ ಅರ್ಧಶತಕಕ್ಕಿಂತ ಹೆಚ್ಚು ರನ್​​ಗಳಿಸಿದ್ದಾರೆ. ಹಾಗೆಯೇ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 287 ಇನಿಂಗ್ಸ್​​ಗಳಲ್ಲಿ 103 ಬಾರಿ 50+ ಸ್ಕೋರ್​​ಗಳಿಸಿದ್ದಾರೆ.

5 / 6
ಇದೀಗ 276ನೇ ಇನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಜೋ ರೂಟ್ ಟೆಸ್ಟ್​ ಕ್ರಿಕೆಟ್​ನಲ್ಲಿ 100 ಬಾರಿ 50+ ಸ್ಕೋರ್​​ಗಳಿಸಿದ ದಾಖಲೆ ಬರೆದಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಹಾಗೂ ವಿಶ್ವದ 4ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಜೋ ರೂಟ್ ಅವರ ಈ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದು, 71 ಓವರ್​​ಗಳ ಮುಕ್ತಾಯದ ವೇಳೆಗೆ ಆಂಗ್ಲರು 5 ವಿಕೆಟ್ ಕಳೆದುಕೊಂಡು 353 ರನ್​ ಕಲೆಹಾಕಿದೆ. ಅಲ್ಲದೆ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಇಂಗ್ಲೆಂಡ್ ಒಟ್ಟು 508 ರನ್​​ಗಳಿಸಿದೆ.

Published On - 10:42 am, Sat, 7 December 24