AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ವಿಶ್ವ ದಾಖಲೆ ಬರೆದ ಜೋ ರೂಟ್

Joe Root Records: ಟೆಸ್ಟ್ ಕ್ರಿಕೆಟ್​ನಲ್ಲಿ ಜೋ ರೂಟ್ ಪರಾಕ್ರಮ ಮುಂದುವರೆದಿದೆ. ಇಂಗ್ಲೆಂಡ್ ಪರ ಈವರೆಗೆ 153 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್ 36 ಶತಕ ಹಾಗೂ 65 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ ಬರೋಬ್ಬರಿ 13006 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅಧಿಪತ್ಯ ಸ್ಥಾಪಿಸಿರುವ ಜೋ ರೂಟ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಹಲವು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 17, 2025 | 12:26 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಮೂರನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ವಿಶೇಷ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಮೂರು ಬಾರಿ ಕೂಡ ರನ್ ಸರದಾರನಾಗಿ ಹೊರಹೊಮ್ಮುವ ಮೂಲಕ ಎಂಬುದು ವಿಶೇಷ. ಅಂದರೆ WTC ಇತಿಹಾಸದಲ್ಲಿ ಮೂರು ಬಾರಿ 1500+ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಜೋ ರೂಟ್.

1 / 5
ಅಷ್ಟೇ ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಎರಡು ಆವೃತ್ತಿಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿ ಅಗ್ರಸ್ಥಾನ ಅಲಂಕರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. 2019-21 ರ WTC ಸರಣಿಯಲ್ಲಿ ಜೋ ರೂಟ್ 3 ಭರ್ಜರಿ ಸೆಂಚುರಿಗಳೊಂದಿಗೆ 1660 ರನ್ ಕಲೆಹಾಕಿ ಮಿಂಚಿದ್ದರು.

2 / 5
2021-2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಂದ್ಯಗಳಲ್ಲಿ ಜೋ ರೂಟ್ ಬ್ಯಾಟ್​ನಿಂದ ಮೂಡಿಬಂದ ಒಟ್ಟು ಸೆಂಚುರಿಗಳು 8. ಅಲ್ಲದೆ ಈ ಅವಧಿಯಲ್ಲಿ 1915 ರನ್​ ಕಲೆಹಾಕಿ ಹೊಸ ಇತಿಹಾಸ ನಿರ್ಮಿಸಿದ್ದರು. ಇನ್ನು 2023-25ರ ಅವಧಿಯಲ್ಲಿ 7 ಶತಕಗಳೊಂದಿಗೆ ಒಟ್ಟು 1968 ರನ್ ಕಲೆಹಾಕಿದ್ದಾರೆ. 

3 / 5
ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಆವೃತ್ತಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಎರಡು ಆವೃತ್ತಿಗಳಲ್ಲಿ 1900+ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

4 / 5
2023-25 ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ರನ್ ಸರದಾರನಾಗಿ ಹೊರಹೊಮ್ಮಿರುವ ಜೋ ರೂಟ್, ಇದೀಗ ಟೀಮ್ ಇಂಡಿಯಾ ವಿರುದ್ಧದ ಟೆಸ್ಟ್ ಸರಣಿಗಾಗಿ ಸಜ್ಜಾಗುತ್ತಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ರೂಟ್ ಬ್ಯಾಟ್​ನಿಂದ ಎಷ್ಟು ರನ್​ಗಳು ಹರಿದು ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ