AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Record: ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್

Joe Root: ಇಂಗ್ಲೆಂಡ್​ ಪರ ಟೆಸ್ಟ್ ಕ್ರಿಕೆಟ್​ನಲ್ಲಿ 11 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಿಸ್ಟರ್ ಕುಕ್ (12472) ಈ ಸಾಧನೆ ಮಾಡಿದ್ದರು.

TV9 Web
| Edited By: |

Updated on: Jun 03, 2023 | 7:21 PM

Share
ENG vs IRE: ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 59 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 56 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ರೂಟ್ 11 ಸಾವಿರ ರನ್ ಪೂರೈಸಿದ್ದಾರೆ.

2 / 7
ಇದರೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಪಂದ್ಯಗಳಲ್ಲಿ 11 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಜೋ ರೂಟ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಬ್ರಿಯಾನ್ ಲಾರಾ ಹೆಸರಿನಲ್ಲಿತ್ತು.

3 / 7
ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಬ್ರಿಯಾನ್ ಲಾರಾ 131 ಪಂದ್ಯಗಳಲ್ಲಿ 11 ಸಾವಿರ ರನ್ ಪೂರೈಸಿದ್ದರು. ಹಾಗೆಯೇ ಶ್ರೀಲಂಕಾದ ಕುಮಾರ ಸಂಗಾಕ್ಕರ 134 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.

4 / 7
ಇದೀಗ ಕೇವಲ 130 ಪಂದ್ಯಗಳ ಮೂಲಕ ಜೋ ರೂಟ್ 11 ಸಾವಿರ ರನ್ ಕಲೆಹಾಕಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಕಳೆದೊಂದು ದಶಕದಿಂದ ಲಾರಾ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.

5 / 7
ಇದಲ್ಲದೆ ಇಂಗ್ಲೆಂಡ್​ ಪರ ಟೆಸ್ಟ್ ಕ್ರಿಕೆಟ್​ನಲ್ಲಿ 11 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಿಸ್ಟರ್ ಕುಕ್ (12472) ಈ ಸಾಧನೆ ಮಾಡಿದ್ದರು.

6 / 7
ಸದ್ಯ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಜೋ ರೂಟ್ (11004) 11ನೇ ಸ್ಥಾನದಲ್ಲಿದ್ದು, ಈ ಪಟ್ಟಿಯಲ್ಲಿ 15921 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

7 / 7
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ

ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು

ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?

ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ

ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ