World Record: ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ ಜೋ ರೂಟ್
TV9 Web | Updated By: ಝಾಹಿರ್ ಯೂಸುಫ್
Updated on:
Jun 03, 2023 | 7:21 PM
Joe Root: ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ 11 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಿಸ್ಟರ್ ಕುಕ್ (12472) ಈ ಸಾಧನೆ ಮಾಡಿದ್ದರು.
1 / 7
ENG vs IRE: ಲಂಡನ್ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಐರ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಕ್ರಿಕೆಟ್ ದಂತಕಥೆ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 7
ಈ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 59 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 4 ಫೋರ್ನೊಂದಿಗೆ 56 ರನ್ ಬಾರಿಸಿದ್ದರು. ಈ ಅರ್ಧಶತಕದೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ರೂಟ್ 11 ಸಾವಿರ ರನ್ ಪೂರೈಸಿದ್ದಾರೆ.
3 / 7
ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಕಡಿಮೆ ಪಂದ್ಯಗಳಲ್ಲಿ 11 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಕೂಡ ಜೋ ರೂಟ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಬ್ರಿಯಾನ್ ಲಾರಾ ಹೆಸರಿನಲ್ಲಿತ್ತು.
4 / 7
ವೆಸ್ಟ್ ಇಂಡೀಸ್ನ ಮಾಜಿ ಆಟಗಾರ ಬ್ರಿಯಾನ್ ಲಾರಾ 131 ಪಂದ್ಯಗಳಲ್ಲಿ 11 ಸಾವಿರ ರನ್ ಪೂರೈಸಿದ್ದರು. ಹಾಗೆಯೇ ಶ್ರೀಲಂಕಾದ ಕುಮಾರ ಸಂಗಾಕ್ಕರ 134 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.
5 / 7
ಇದೀಗ ಕೇವಲ 130 ಪಂದ್ಯಗಳ ಮೂಲಕ ಜೋ ರೂಟ್ 11 ಸಾವಿರ ರನ್ ಕಲೆಹಾಕಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಕಳೆದೊಂದು ದಶಕದಿಂದ ಲಾರಾ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಮುರಿದಿದ್ದಾರೆ.
6 / 7
ಇದಲ್ಲದೆ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ 11 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡದ ಮಾಜಿ ನಾಯಕ ಅಲಿಸ್ಟರ್ ಕುಕ್ (12472) ಈ ಸಾಧನೆ ಮಾಡಿದ್ದರು.
7 / 7
ಸದ್ಯ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಜೋ ರೂಟ್ (11004) 11ನೇ ಸ್ಥಾನದಲ್ಲಿದ್ದು, ಈ ಪಟ್ಟಿಯಲ್ಲಿ 15921 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.