AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Root: ಟೆಸ್ಟ್​ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಜೋ ರೂಟ್

Joe Root World Record: ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ ಈವರೆಗೆ 153 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 279 ಇನಿಂಗ್ಸ್ ಆಡಿರುವ ಅವರು 22612 ಎಸೆತಗಳನ್ನು ಎದುರಿಸಿ ಒಟ್ಟು 13006 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಹೊಸ ಮೈಲುಗಲ್ಲು ದಾಟಿದ್ದಾರೆ. ಇದೀಗ ಟೆಸ್ಟ್​ ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ರೂಟ್ ಇದೇ ಫಾರ್ಮ್ ಮುಂದುವರೆಸಿದರೆ ಹೊಸ ವಿಶ್ವ ದಾಖಲೆಯನ್ನು ಸಹ ತಮ್ಮದಾಗಿಸಿಕೊಳ್ಳಬಹುದು.

ಝಾಹಿರ್ ಯೂಸುಫ್
|

Updated on: May 24, 2025 | 10:57 AM

ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ (Joe Root)​ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ 13 ಸಾವಿರ ರನ್​ಗಳನ್ನು ಪೂರೈಸುವ ಮೂಲಕ. ನಾಟಿಂಗ್​ಹ್ಯಾಮ್​ನ ಟ್ರೆಂಟ್ ಬ್ರಿಡ್ಜ್​ ಮೈದಾನದಲ್ಲಿ ನಡೆಯುತ್ತಿರುವ ಝಿಂಬಾಬ್ವೆ ವಿರುದ್ಧದ ಟೆಸ್ಟ್​ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ರೂಟ್ 34 ರನ್ ಬಾರಿಸಿದ್ದಾರೆ.

1 / 5
ಈ 34 ರನ್​ಗಳೊಂದಿಗೆ ಜೋ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ 13 ಸಾವಿರ ರನ್​ಗಳನ್ನು ಪೂರೈಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 13000 ರನ್​ಗಳನ್ನು ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಸೌತ್ ಆಫ್ರಿಕಾದ ಜಾಕ್ ಕಾಲಿಸ್ ಹೆಸರಿನಲ್ಲಿತ್ತು. 159 ಟೆಸ್ಟ್ ಪಂದ್ಯಗಳ ಮೂಲಕ ಕಾಲಿಸ್ 13 ಸಾವಿರ ರನ್​ಗಳನ್ನು ಪೂರೈಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 13 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 5
ಇದೀಗ ಈ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ಪರ ಈವರೆಗೆ 153 ಪಂದ್ಯಗಳನ್ನಾಡಿರುವ ಜೋ ರೂಟ್ ಒಟ್ಟು 13006 ರನ್​ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್​ ಇತಿಹಾಸದಲ್ಲೇ ಅತೀ ಕಡಿಮೆ ಪಂದ್ಯಗಳ ಮೂಲಕ 13 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.

4 / 5
ಸದ್ಯ 13006 ರನ್ ಕಲೆಹಾಕಿರುವ ಜೋ ರೂಟ್, ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ. ಮುಂಬರುವ ವರ್ಷಗಳಲ್ಲಿ 2915 ರನ್​ ಕಲೆಹಾಕಿದರೆ, ಸಚಿನ್ ತೆಂಡೂಲ್ಕರ್ (15921) ಅವರನ್ನು ಹಿಂದಿಕ್ಕಿ ಜೋ ರೂಟ್ ಮೊದಲ ಸ್ಥಾನಕ್ಕೇರಬಹುದು. ಹೀಗಾಗಿ ರೂಟ್ ಇನ್ನೂ ಮೂರು ವರ್ಷ ಆಡಿದರೆ, ಟೆಸ್ಟ್​ನಲ್ಲಿ ಹೊಸ ವಿಶ್ವ ದಾಖಲೆಯನ್ನು ಸಹ ನಿರೀಕ್ಷಿಸಬಹುದು.

5 / 5
Follow us
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು

ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್

17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್

ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ

ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ

ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ

ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ

ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ

ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ