Joe Root: ಜೋ ರೂಟ್ ಗಳಿಸಿದ್ದು 29 ರನ್​, ಬರೆದಿದ್ದು ವಿಶ್ವ ದಾಖಲೆ..!

| Updated By: ಝಾಹಿರ್ ಯೂಸುಫ್

Updated on: Jan 27, 2024 | 8:53 AM

Joe Root Records: ಭಾರತದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 29 ರನ್ ಬಾರಿಸಿ ಇಂಗ್ಲೆಂಡ್​ ತಂಡದ ಸ್ಟಾರ್ ಆಟಗಾರ ಜೋ ರೂಟ್ 2 ದಾಖಲೆಗಳನ್ನು ಬರೆದಿದ್ದಾರೆ. ಅದರಲ್ಲೊಂದು ವಿಶ್ವ ದಾಖಲೆ ಎಂಬುದು ವಿಶೇಷ.

1 / 6
ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಜೋ ರೂಟ್ (Joe Root) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ 60 ಎಸೆತಗಳಲ್ಲಿ 1 ಫೋರ್​ನೊಂದಿಗೆ 29 ರನ್ ಬಾರಿಸಿದ್ದರು.

2 / 6
ಈ 29 ರನ್​ಗಳೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಇತಿಹಾಸದಲ್ಲೇ 4 ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡರು. ಅಂದರೆ ರೂಟ್ ಅವರನ್ನು ಹೊರತುಪಡಿಸಿ WTC ನಲ್ಲಿ ಯಾವುದೇ ಬ್ಯಾಟರ್ 4000 ರನ್​ ಕಲೆಹಾಕಿಲ್ಲ.

3 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 48 ಪಂದ್ಯಗಳನ್ನಾಡಿರುವ ರೂಟ್ 87 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 12 ಶತಕ ಹಾಗೂ 16 ಅರ್ಧಶತಕಗಳೊಂದಿಗೆ ಒಟ್ಟು 4016 ರನ್ ಕಲೆಹಾಕಿದ್ದಾರೆ. ಈ ಮೂಲಕ WTC ನಲ್ಲಿ 4 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಇದಲ್ಲದೆ ಈ 29 ರನ್​ಗಳೊಂದಿಗೆ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು.

5 / 6
ಇಂಗ್ಲೆಂಡ್ ವಿರುದ್ಧ 32 ಟೆಸ್ಟ್ ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 7 ಶತಕಗಳೊಂದಿಗೆ 2535 ರನ್ ಬಾರಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಜೋ ರೂಟ್ ಅಳಿಸಿ ಹಾಕಿದ್ದಾರೆ.

6 / 6
ಭಾರತದ ವಿರುದ್ಧ 27 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 9 ಭರ್ಜರಿ ಶತಕಗಳೊಂದಿಗೆ 2555 ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಡೊ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.