Joe Root: ಶತಕಗಳ ಅರ್ಧಶತಕ ಪೂರೈಸಿದ ಜೋ ರೂಟ್

Joe Root Record: ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಜೋ ರೂಟ್ ಹೊಸ ಇತಿಹಾಸ ರಚಿಸಿದ್ದಾರೆ. ಇಂಗ್ಲೆಂಡ್ ಪರ 265 ಟೆಸ್ಟ್ ಇನಿಂಗ್ಸ್ ಆಡಿರುವ ರೂಟ್ ಒಟ್ಟು 34 ಶತಕಗಳನ್ನು ಬಾರಿಸಿದ್ದಾರೆ. ಈ ಶತಕಗಳೊಂದಿಗೆ ಟೆಸ್ಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಇಂಗ್ಲೆಂಡ್ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಅಲಿಸ್ಟರ್ ಕುಕ್ (33 ಶತಕ) ಹೆಸರಿನಲ್ಲಿತ್ತು.

|

Updated on: Sep 01, 2024 | 7:57 AM

ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ 50ನೇ ಅಂತಾರಾಷ್ಟ್ರೀಯ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 143 ರನ್​ ಬಾರಿಸಿದ್ದ ರೂಟ್, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ 103 ರನ್ ಸಿಡಿಸಿದ್ದಾರೆ.

1 / 6
ಈ ಮೂಲಕ ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಬಾರಿಸಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಹಾಗೂ ವಿಶ್ವದ 9ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2 / 6
ಇದಲ್ಲದೆ, ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ 50 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ 2ನೇ ಆಟಗಾರ ಎಂಬ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ.

3 / 6
533 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 591 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 50 ಏಕದಿನ ಶತಕ, 29 ಟೆಸ್ಟ್ ಶತಕ ಹಾಗೂ 1 ಟಿ20 ಸೆಂಚುರಿಯೊಂದಿಗೆ ಒಟ್ಟು 80 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಇದೀಗ ಈ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. 349 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರೂಟ್ 455 ಇನಿಂಗ್ಸ್​ಗಳ ಮೂಲಕ ಒಟ್ಟು 50 ಶತಕಗಳನ್ನು ಬಾರಿಸಿದ್ದಾರೆ. ಈ ವೇಳೆ ಟೆಸ್ಟ್​ನಲ್ಲಿ 34 ಸೆಂಚುರಿಸಿ ಸಿಡಿಸಿದರೆ, ಏಕದಿನ ಕ್ರಿಕೆಟ್​ನಲ್ಲಿ 16 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಕ್ರಿಯ ಬ್ಯಾಟರ್​ಗಳ ಪಟ್ಟಿಯಲ್ಲಿ 50 ಶತಕಗಳನ್ನು ಪೂರೈಸಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

5 / 6
ಹಾಗೆಯೇ 34ನೇ ಟೆಸ್ಟ್ ಶತಕದೊಂದಿಗೆ ಸುನಿಲ್ ಗವಾಸ್ಕರ್, ಬ್ರಿಯಾನ್ ಲಾರಾ,  ಮಹೇಲ ಜಯವರ್ಧನೆ, ಯೂನಿಸ್ ಖಾನ್ ಅವರ ಟೆಸ್ಟ್ ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋ ರೂಟ್ 6ನೇ ಸ್ಥಾನಕ್ಕೇರಿದ್ದಾರೆ.

6 / 6
Follow us
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್

ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ

ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್

ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು

‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್

ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ

Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ