AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ರಾವಿಡ್ ದಾಖಲೆ ಸರಿಗಟ್ಟಿ ಸಚಿನ್ ರೆಕಾರ್ಡ್​ನತ್ತ ಮುನ್ನುಗ್ಗಿದ ಜೋ ರೂಟ್

New Zealand vs England: ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 427 ರನ್ ಪೇರಿಸಿ ಡಿಕ್ಲೇರ್ ಘೋಷಿಸಿದೆ. ಅದರಂತೆ ಇದೀಗ ನ್ಯೂಝಿಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 583 ರನ್​ಗಳ ಗುರಿ ಪಡೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 08, 2024 | 7:25 AM

Share
ಟೆಸ್ಟ್​ ಕ್ರಿಕೆಟ್​​ನಲ್ಲಿ ಜೋ ರೂಟ್ ಅಬ್ಬರ ಮುಂದುವರೆದಿದೆ. ಈ ಅಬ್ಬರದೊಂದಿಗೆ ಇಂಗ್ಲೆಂಡ್ ಬ್ಯಾಟರ್​​ ತನ್ನ 36ನೇ ಟೆಸ್ಟ್ ಶತಕ ಪೂರೈಸಿದ್ದಾರೆ. ಈ ಶತಕದೊಂದಿಗೆ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಜೋ ರೂಟ್ ಸರಿಗಟ್ಟಿದ್ದಾರೆ.

1 / 6
ವೆಲ್ಲಿಂಗ್ಟನ್​​ನಲ್ಲಿ ನಡೆಯುತ್ತಿರುವ ಆತಿಥೇಯ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​​ನಲ್ಲಿ ಜೋ ರೂಟ್ 130 ಎಸೆತಗಳಲ್ಲಿ 11 ಫೋರ್​​ಗಳೊಂದಿಗೆ 106 ರನ್ ಬಾರಿಸಿದ್ದಾರೆ. ಈ ಭರ್ಜರಿ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ರೂಟ್ 5ನೇ ಸ್ಥಾನಕ್ಕೇರಿದ್ದಾರೆ.

2 / 6
ಇದಕ್ಕೂ ಮುನ್ನ ಐದನೇ ಸ್ಥಾನದಲ್ಲಿ ರಾಹುಲ್ ದ್ರಾವಿಡ್ ಮಾತ್ರ ಕಾಣಿಸಿಕೊಂಡಿದ್ದರು. 164 ಟೆಸ್ಟ್ ಪಂದ್ಯಗಳಲ್ಲಿ 36 ಶತಕ ಸಿಡಿಸಿ ದ್ರಾವಿಡ್ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಜೋ ರೂಟ್ ಯಶಸ್ವಿಯಾಗಿದ್ದಾರೆ.

3 / 6
ಈವರೆಗೆ 151 ಟೆಸ್ಟ್​ ಪಂದ್ಯಗಳನ್ನಾಡಿರುವ ಜೋ ರೂಟ್ 36 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೆಸ್ಟ್ ಸೆಂಚುರಿ ಸರದಾರರ ಪಟ್ಟಿಯಲ್ಲಿ ಜಂಟಿಯಾಗಿ ರಾಹುಲ್ ದ್ರಾವಿಡ್ ಜೊತೆ 5ನೇ ಸ್ಥಾನ ಅಲಂಕರಿಸಿದ್ದಾರೆ.

4 / 6
ಸದ್ಯ ಜೋ ರೂಟ್ ಮುಂದಿರುವುದು ಕುಮಾರ ಸಂಗಾಕ್ಕರ, ರಿಕಿ ಪಾಂಟಿಂಗ್, ಜಾಕ್ಸ್ ಕಾಲಿಸ್ ಮತ್ತು ಸಚಿನ್ ತೆಂಡೂಲ್ಕರ್ ಮಾತ್ರ. ಅದರಲ್ಲೂ 33 ವರ್ಷದ ಜೋ ರೂಟ್ ಈ ಭರ್ಜರಿ ಫಾರ್ಮ್​ ಮುಂದುವರೆಸಿದರೆ ಸಚಿನ್ ತೆಂಡೂಲ್ಕರ್ ಅವರ ಶತಕಗಳ ದಾಖಲೆಯನ್ನು ಮುರಿಯಬಹುದು.

5 / 6
ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಮಾಸ್ಟರ್ ಬ್ಲಾಸ್ಟರ್ 200 ಟೆಸ್ಟ್ ಪಂದ್ಯಗಳಲ್ಲಿ ಒಟ್ಟು 51 ಶತಕ ಬಾರಿಸಿದ್ದಾರೆ. ಇದೀಗ 36 ಸೆಂಚುರಿ ಸಿಡಿಸಿರುವ ಜೋ ರೂಟ್ ಮುಂಬರುವ ದಿನಗಳಲ್ಲಿ 16 ಶತಕ ಬಾರಿಸಿದರೆ ಟೆಸ್ಟ್​​ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಳ್ಳಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು