AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joe Root: ರೋಹಿತ್ ಶರ್ಮಾರ ಸೆಂಚುರಿ​ ದಾಖಲೆಯನ್ನು ಸರಿಗಟ್ಟಿದ ಜೋ ರೂಟ್

India vs England 4th Test: ಭಾರತದ ವಿರುದ್ಧ ನಾಲ್ಕನೇ ಟೆಸ್ಟ್​ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಸೆಂಚುರಿ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 353 ರನ್ ಕಲೆಹಾಕಿದೆ. ವಿಶೇಷ ಎಂದರೆ ಈ ಶತಕದೊಂದಿಗೆ ಜೋ ರೂಟ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 24, 2024 | 11:39 AM

ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ (Joe Root) ಅಜೇಯ ಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ರಕ್ಷಣಾತ್ಮಕ ಆಟದೊಂದಿಗೆ ರನ್ ಪೇರಿಸಿದ ರೂಟ್ ಅಜೇಯ 122 ರನ್​ ಬಾರಿಸಿದರು.

1 / 7
ಈ ಭರ್ಜರಿ ಶತಕದೊಂದಿಗೆ ಜೋ ರೂಟ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಸೆಂಚುರಿಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಸಕ್ರಿಯ ಸೆಂಚುರಿ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.

2 / 7
ಅಂದರೆ ಪ್ರಸ್ತುತ ಕ್ರಿಕೆಟ್​ ಆಡುತ್ತಿರುವ ಆಟಗಾರರಲ್ಲಿ ಅತೀ ಹೆಚ್ಚು ಅಂತಾರಾಷ್ಟ್ರೀಯ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 580 ಇನಿಂಗ್ಸ್​ ಆಡಿರುವ ಕಿಂಗ್ ಕೊಹ್ಲಿ ಒಟ್ಟು 80 ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ.

3 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ 467 ಇನಿಂಗ್ಸ್​ಗಳಲ್ಲಿ 49 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಕ್ರಿಯ ಸೆಂಚುರಿ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

4 / 7
ಇದೀಗ 444 ಇನಿಂಗ್ಸ್​ಗಳ ಮೂಲಕ ಜೋ ರೂಟ್ 47 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಪ್ರಸ್ತುತ ಶತಕ ವೀರರ ಪಟ್ಟಿಯಲ್ಲಿ ರೂಟ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಇದಕ್ಕೂ ಮುನ್ನ 3ನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು.

5 / 7
ರೋಹಿತ್ ಶರ್ಮಾ 496 ಇನಿಂಗ್ಸ್​ಗಳ ಮೂಲಕ ಒಟ್ಟು 47 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ಇದೀಗ 444 ಇನಿಂಗ್ಸ್​ಗಳ ಮೂಲಕ 47 ಶತಕಗಳನ್ನು ಪೂರೈಸಿ ಜೋ ರೂಟ್ ಹಿಟ್​ಮ್ಯಾನ್​ರನ್ನು ಹಿಂದಿಕ್ಕಿರುವುದು ವಿಶೇಷ.

6 / 7
ಇನ್ನು ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಸ್ಟೀವ್ ಸ್ಮಿತ್ ಹೆಸರಿನಲ್ಲಿತ್ತು. ಸ್ಮಿತ್ ಒಟ್ಟು 9 ಶತಕಗಳನ್ನು ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ 10ನೇ ಶತಕ ಸಿಡಿಸುವ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

7 / 7

Published On - 11:33 am, Sat, 24 February 24

Follow us
ದಾಖಲಾತಿ ಅರ್ಜಿಗಾಗಿ ರಾತ್ರಿ ಶಾಲಾ ಆವರಣದಲ್ಲಿ ಮಲಗುತ್ತಿದ್ದರಂತೆ ಪೋಷಕರು

ವಿರಾಟ್ ಕೊಹ್ಲಿ ಕಟೌಟ್ ಎದುರು ಮೇಕೆ ಬಲಿ: ಆರ್​ಸಿಬಿ ಫ್ಯಾನ್ಸ್ ಹುಚ್ಚಾಟ

ದಂಪತಿಗೆ ಮದುವೆಯಾಗಿ ಕೇವಲ ಎರಡು ವರ್ಷವಾಗಿತ್ತು

ಮೊಹಮ್ಮದ್ ಸಿರಾಜ್​ಗೆ ವಜ್ರದ ಉಂಗುರ ನೀಡಿದ ರೋಹಿತ್ ಶರ್ಮಾ

VIDEO: ಔಟ್ ಮಾಡು... ಔಟ್ ಮಾಡು... ಪಂದ್ಯದ ನಡುವೆ ಕಾವ್ಯ ಮಾರನ್ ರಿಯಾಕ್ಷನ್

ದಿಂಬಂ ಘಾಟ್​ನಲ್ಲಿ ರಾಶಿ ರಾಶಿ ಟೊಮೆಟೋ ತಿಂದು ತೇಗಿದ ಕಾಡಾನೆ: ವಿಡಿಯೋ ನೋಡಿ

Daily Devotional: ಮನೆ ಹತ್ತಿರ ಅಶ್ವಥ್ಥ ವೃಕ್ಷ ಬೆಳೆದರೆ ಏನು ಮಾಡಬೇಕು?

horoscope: ಈ ರಾಶಿಯವರು ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳುವರು

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ