Joe Root: ರೋಹಿತ್ ಶರ್ಮಾರ ಸೆಂಚುರಿ ದಾಖಲೆಯನ್ನು ಸರಿಗಟ್ಟಿದ ಜೋ ರೂಟ್
TV9 Web | Updated By: ಝಾಹಿರ್ ಯೂಸುಫ್
Updated on:
Feb 24, 2024 | 11:39 AM
India vs England 4th Test: ಭಾರತದ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಸೆಂಚುರಿ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 353 ರನ್ ಕಲೆಹಾಕಿದೆ. ವಿಶೇಷ ಎಂದರೆ ಈ ಶತಕದೊಂದಿಗೆ ಜೋ ರೂಟ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.
1 / 7
ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ (Joe Root) ಅಜೇಯ ಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ರಕ್ಷಣಾತ್ಮಕ ಆಟದೊಂದಿಗೆ ರನ್ ಪೇರಿಸಿದ ರೂಟ್ ಅಜೇಯ 122 ರನ್ ಬಾರಿಸಿದರು.
2 / 7
ಈ ಭರ್ಜರಿ ಶತಕದೊಂದಿಗೆ ಜೋ ರೂಟ್ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಸೆಂಚುರಿಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಸಕ್ರಿಯ ಸೆಂಚುರಿ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದ್ದಾರೆ.
3 / 7
ಅಂದರೆ ಪ್ರಸ್ತುತ ಕ್ರಿಕೆಟ್ ಆಡುತ್ತಿರುವ ಆಟಗಾರರಲ್ಲಿ ಅತೀ ಹೆಚ್ಚು ಅಂತಾರಾಷ್ಟ್ರೀಯ ಶತಕ ಬಾರಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. 580 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ ಒಟ್ಟು 80 ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದಾರೆ.
4 / 7
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೇವಿಡ್ ವಾರ್ನರ್. ಆಸ್ಟ್ರೇಲಿಯಾ ತಂಡದ ಆರಂಭಿಕ ಆಟಗಾರ 467 ಇನಿಂಗ್ಸ್ಗಳಲ್ಲಿ 49 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಸಕ್ರಿಯ ಸೆಂಚುರಿ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.
5 / 7
ಇದೀಗ 444 ಇನಿಂಗ್ಸ್ಗಳ ಮೂಲಕ ಜೋ ರೂಟ್ 47 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಪ್ರಸ್ತುತ ಶತಕ ವೀರರ ಪಟ್ಟಿಯಲ್ಲಿ ರೂಟ್ ಮೂರನೇ ಸ್ಥಾನ ಅಲಂಕರಿಸಿದ್ದಾರೆ. ವಿಶೇಷ ಎಂದರೆ ಇದಕ್ಕೂ ಮುನ್ನ 3ನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು.
6 / 7
ರೋಹಿತ್ ಶರ್ಮಾ 496 ಇನಿಂಗ್ಸ್ಗಳ ಮೂಲಕ ಒಟ್ಟು 47 ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಿದ್ದಾರೆ. ಇದೀಗ 444 ಇನಿಂಗ್ಸ್ಗಳ ಮೂಲಕ 47 ಶತಕಗಳನ್ನು ಪೂರೈಸಿ ಜೋ ರೂಟ್ ಹಿಟ್ಮ್ಯಾನ್ರನ್ನು ಹಿಂದಿಕ್ಕಿರುವುದು ವಿಶೇಷ.
7 / 7
ಇನ್ನು ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಜೋ ರೂಟ್ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಸ್ಟೀವ್ ಸ್ಮಿತ್ ಹೆಸರಿನಲ್ಲಿತ್ತು. ಸ್ಮಿತ್ ಒಟ್ಟು 9 ಶತಕಗಳನ್ನು ಬಾರಿಸಿ ಈ ದಾಖಲೆ ಬರೆದಿದ್ದರು. ಇದೀಗ 10ನೇ ಶತಕ ಸಿಡಿಸುವ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
Published On - 11:33 am, Sat, 24 February 24