23 ಸಾವಿರ ಎಸೆತಗಳನ್ನು ಎದುರಿಸಿದ ಜೋ ರೂಟ್

Updated on: Jul 12, 2025 | 8:10 AM

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಶತಕದ ನೆರವಿನೊಂದಿಗೆ ಪ್ರಥಮ ಇನಿಂಗ್ಸ್​ನಲ್ಲಿ 382 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ 2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 145 ರನ್​​ಗಳಿಸಿದೆ.

1 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಜೋ ರೂಟ್ (Joe Root) ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಕ್ರೀಸ್ ಕಚ್ಚಿ ನಿಲ್ಲುವ ಮೂಲಕ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ 23 ಸಾವಿರಕ್ಕೂ ಅಧಿಕ ಎಸೆತಗಳನ್ನು ಎದುರಿಸಿದ ವಿಶ್ವದ ಕೆಲವೇ ಕೆಲವು ಆಟಗಾರರ ಪಟ್ಟಿಗೆ ಇದೀಗ ಜೋ ರೂಟ್ ಎಂಟ್ರಿ ಕೊಟ್ಟಿದ್ದಾರೆ. 

2 / 5
ಲಾರ್ಡ್ಸ್​ನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ 199 ಎಸೆತಗಳನ್ನು ಎದುರಿಸಿ 104 ರನ್ ಬಾರಿಸಿದ್ದರು. 199 ಎಸೆತಗಳೊಂದಿಗೆ ರೂಟ್ ಟೆಸ್ಟ್ ಕ್ರಿಕೆಟ್​ನಲ್ಲಿ 23 ಸಾವಿರ ಎಸೆತಗಳನ್ನು ಎದುರಿಸಿದ ಇಂಗ್ಲೆಂಡ್​ನ ಎರಡನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. 

3 / 5
ಈವರೆಗೆ 156 ಟೆಸ್ಟ್ ಪಂದ್ಯಗಳನ್ನಾಡಿರುವ ಜೋ ರೂಟ್ 284 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 23015 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 13219 ರನ್​ ಕಲೆಹಾಕಿದ್ದಾರೆ. ಇದರ ನಡುವೆ ಜೋ ರೂಟ್ ಬ್ಯಾಟ್​ನಿಂದ 37 ಭರ್ಜರಿ ಶತಕಗಳು ಹಾಗೂ 66 ಅರ್ಧಶತಕಗಳು ಸಹ ಮೂಡಿಬಂದಿವೆ.   ಇನ್ನು 23015 ಎಸೆತಗಳಲ್ಲಿ ರೂಟ್​ 1408 ಫೋರ್ ಹಾಗೂ 45 ಸಿಕ್ಸ್​ಗಳನ್ನು ಕೂಡ ಬಾರಿಸಿದ್ದಾರೆ.

4 / 5
ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 23000+ ಎಸೆತಗಳನ್ನು ಎದುರಿಸಿದ ವಿಶ್ವದ 7ನೇ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡರು. ಅಲ್ಲದೆ ಅಲಸ್ಟೈರ್ ಕುಕ್ ಬಳಿಕ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಎರಡನೇ ದಾಂಡಿಗ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್.

5 / 5
ಟೆಸ್ಟ್ ಕ್ರಿಕೆಟ್​ನಲ್ಲಿ ಬರೋಬ್ಬರಿ 31258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ವಿಶ್ವ ದಾಖಲೆ ಬರೆದಿದ್ದಾರೆ. ಆ ನಂತರದ ಸ್ಥಾನಗಳಲ್ಲಿ ಸಚಿನ್ ತೆಂಡೂಲ್ಕರ್ (29437), ಜಾಕ್ಸ್ ಕಾಲಿಸ್ (28903), ಶಿವನರೈನ್ ಚಂದ್ರಪಾಲ್ (27395), ಅಲನ್ ಬಾರ್ಡರ್ (27002), ಅಲಸ್ಟೈರ್ ಕುಕ್ (26562). ಇದೀಗ ಈ ಪಟ್ಟಿಗೆ 23015 ಎಸೆತಗಳನ್ನು ಎದುರಿಸಿರುವ ಜೋ ರೂಟ್ ಎಂಟ್ರಿ ಕೊಟ್ಟಿದ್ದಾರೆ.