Joe Root: ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಜೋ ರೂಟ್

|

Updated on: Sep 10, 2024 | 11:55 AM

Joe Root Records: 146 ಟೆಸ್ಟ್​ ಪಂದ್ಯಗಳಲ್ಲಿ 237 ಇನಿಂಗ್ಸ್ ಆಡಿರುವ ಜೋ ರೂಟ್ 34 ಶತಕ ಹಾಗೂ 68 ಅರ್ಧಶತಕಗಳೊಂದಿಗೆ ಒಟ್ಟು 12402 ರನ್ ಕಲೆಹಾಕಿದ್ದಾರೆ. ಈ ಮೂಲಕ ಕುಮಾರ ಸಂಗಾಕ್ಕರ ಅವರನ್ನು ಹಿಂದಿಕ್ಕಿ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ 6ನೇ ಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ನಿರ್ಮಿಸುವ ಹೊಸ್ತಿಲಲ್ಲಿದ್ದಾರೆ.

1 / 6
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯಲ್ಲಿ ಅತ್ಯದ್ಭುತ ಪ್ರದರ್ಶನ ನೀಡಿದ ಜೋ ರೂಟ್ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿಯೊಂದಿಗೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಮುರಿದು ರೂಟ್ ಮುನ್ನುಗ್ಗಿದ್ದಾರೆ.

2 / 6
ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಒಟ್ಟು 6 ಇನಿಂಗ್ಸ್ ಆಡಿರುವ ಜೋ ರೂಟ್ 2 ಭರ್ಜರಿ ಶತಕ ಹಾಗೂ 1 ಅರ್ಧಶತಕದೊಂದಿಗೆ ಒಟ್ಟು 375 ರನ್ ಕಲೆಹಾಕಿದ್ದಾರೆ. ಈ ಶ್ರೇಷ್ಠ ಪ್ರದರ್ಶನದಿಂದಾಗಿ​ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಇಂಗ್ಲೆಂಡ್ ಪರ ಅತ್ಯಧಿಕ ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​ನ ಆ್ಯಂಡ್ರ್ಯೂ ಸ್ಟ್ರಾಸ್, ಅಲೆಸ್ಟಕ್ ಕುಕ್ ಹಾಗೂ ಗ್ರಹಾಂ ಗೂಚ್ ಹೆಸರಿನಲ್ಲಿತ್ತು. ಈ ಮೂವರು ಆಟಗಾರರು 5 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ 6ನೇ ಬಾರಿ ಪ್ಲೇಯರ್ ಆಫ್ ಸಿರೀಸ್ ಪ್ರಶಸ್ತಿ ಪಡೆಯುವ ಮೂಲಕ ಜೋ ರೂಟ್ ಇಂಗ್ಲೆಂಡ್​ನ ಮಾಜಿ ಆಟಗಾರರ ಸಾಧನೆಯನ್ನು ಹಿಂದಿಕ್ಕಿದ್ದಾರೆ.

4 / 6
ಹಾಗೆಯೇ ಸರಣಿ ಶ್ರೇಷ್ಠ ಪ್ರಶಸ್ತಿಯಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೂಡ ಮುರಿದಿದ್ದಾರೆ. ಟೀಮ್ ಇಂಡಿಯಾ ಪರ 74 ಟೆಸ್ಟ್ ಸರಣಿಗಳನ್ನು ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 5 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.

5 / 6
ಇದೀಗ 48 ಟೆಸ್ಟ್ ಸರಣಿಗಳ ಮೂಲಕ ಜೋ ರೂಟ್ 6ನೇ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಐದಕ್ಕಿಂತ ಹೆಚ್ಚು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿಗೆ ಎಂಟ್ರಿ ಕೊಟ್ಟಿದ್ದಾರೆ.

6 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್. ಲಂಕಾ ಪರ 61 ಟೆಸ್ಟ್ ಸರಣಿಗಳನ್ನಾಡಿರುವ ಮುರಳೀಧರನ್ ಒಟ್ಟು 11 ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಸ್ಪಿನ್ ಮಾಂತ್ರಿಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಬಾರಿ ಪ್ಲೇಯರ್ ಆಫ್ ದಿ ಸಿರೀಸ್ ಪ್ರಶಸ್ತಿ ಪಡೆದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.