AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಫ್ಟಿಗಳ ಫಿಫ್ಟಿ… ಜೋ ರೂಟ್ ಹೆಸರಿಗೆ ಮತ್ತೊಂದು ಭರ್ಜರಿ ದಾಖಲೆ

ಜೋ ರೂಟ್ ದಾಖಲೆಗಳ ನಾಗಾಲೋಟ ಮುಂದುವರೆದಿದೆ. ಈ ಬಾರಿ ಅವರು ದಾಖಲೆ ನಿರ್ಮಿಸಿದ್ದು ಅರ್ಧಶತಕಗಳ ಅರ್ಧಶತಕದೊಂದಿಗೆ. ಅಡಿಲೇಡ್ ಓವಲ್ ಮೈದಾನದಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಇಂಗ್ಲೆಂಡ್ ರನ್ ಮೆಷಿನ್, ಭರ್ಜರಿ ಅರ್ಧಶತಕ ಸಿಡಿಸಿ ಆಂಗ್ಲರ ಪರ ಹೊಸ ಇತಿಹಾಸ ಬರೆದಿದ್ದಾರೆ. 

ಝಾಹಿರ್ ಯೂಸುಫ್
|

Updated on: Nov 15, 2026 | 12:54 PM

Share
ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಜೋ ರೂಟ್ ಏಕದಿನ ಕ್ರಿಕೆಟ್‌ನಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ, ಏಕದಿನ ಮಾದರಿಯಲ್ಲಿ 50 ಅರ್ಧಶತಕಗಳನ್ನು ಸಿಡಿಸಿದ ಇಂಗ್ಲೆಂಡ್‌ನ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  (PC: Gettyimages)

1 / 5
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ಆರಂಭಿಕ ಆಘಾತ ಅನುಭವಿಸಿತು. ಈ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್, ಕೇವಲ 50 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. (PC: Gettyimages)

2 / 5
ಈ ಅರ್ಧಶತಕದೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಇಂಗ್ಲೆಂಡ್ ಪರ 50 ಅರ್ಧಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಜೋ ರೂಟ್ ತಮ್ಮದಾಗಿಸಿಕೊಂಡರು. ರೂಟ್ ಅವರನ್ನು ಹೊರತುಪಡಿಸಿ ಇಂಗ್ಲೆಂಡ್​ನ ಯಾವುದೇ ಬ್ಯಾಟರ್ ಏಕದಿನ ಕ್ರಿಕೆಟ್​ನಲ್ಲಿ ಐವತ್ತು ಅರ್ಧಶತಕ ಬಾರಿಸಿಲ್ಲ ಎಂಬುದು ವಿಶೇಷ. (PC: Gettyimages)

3 / 5
ಇಂಗ್ಲೆಂಡ್ ಪರ ಅತಿ ಹೆಚ್ಚು ಏಕದಿನ ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜೋ ರೂಟ್ (50) ಅಗ್ರಸ್ಥಾನದಲ್ಲಿದ್ದಾರೆ. ಮಾಜಿ ನಾಯಕ ಇಯಾನ್ ಮಾರ್ಗನ್ (42) ಎರಡನೇ ಸ್ಥಾನದಲ್ಲಿದ್ದರೆ, ಇಯಾನ್ ಬೆಲ್ (35) ಮೂರನೇ ಸ್ಥಾನದಲ್ಲಿದ್ದಾರೆ. ರೂಟ್ ಈಗಾಗಲೇ ಇಂಗ್ಲೆಂಡ್ ಪರ ಅತಿ ಹೆಚ್ಚು ಏಕದಿನ ರನ್ (8,089) ಮತ್ತು ಶತಕ (20) ಗಳಿಸಿದ ದಾಖಲೆಯನ್ನೂ ಹೊಂದಿದ್ದಾರೆ. (PC: Gettyimages)

4 / 5
ಇನ್ನು ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಅರ್ಧಶತಕ ಬಾರಿಸಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ ತೆಂಡೂಲ್ಕರ್ 96 ಅರ್ಧಶತಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಕುಮಾರ ಸಂಗಕ್ಕಾರ (93) ಮತ್ತು ಜಾಕ್ ಕಾಲಿಸ್ (86) ನಂತರದ ಸ್ಥಾನಗಳಲ್ಲಿದ್ದಾರೆ. (PC: Gettyimages)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us