AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ವಿರುದ್ಧ ಹೊಸ ಇತಿಹಾಸ ಬರೆದ ಜೋಸೆಫ್ ಎಡ್ವರ್ಡ್ ರೂಟ್

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರೂಟ್ 248 ಎಸೆತಗಳಲ್ಲಿ 14 ಫೋರ್​ಗಳೊಂದಿಗೆ 150 ರನ್ ಬಾರಿಸಿದ್ದಾರೆ. ಈ ಭರ್ಜರಿ ಶತಕದೊಂದಿಗೆ ಜೋ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jul 26, 2025 | 12:04 PM

Share
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ್ದು ಯಾರು? ಈ ಪ್ರಶ್ನೆಗೆ ಸದ್ಯದ ಉತ್ತರ ಜೋಸೆಫ್ ಎಡ್ವರ್ಡ್ ರೂಟ್ ಅಲಿಯಾಸ್ ಜೋ ರೂಟ್. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ 150 ರನ್​ಗಳ ಮ್ಯಾರಥಾನ್ ಇನಿಂಗ್ಸ್ ಆಡುವ ಮೂಲಕ ರೂಟ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 5
ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ವಿರುದ್ಧ ಅತೀ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ವಿರುದ್ಧ 46 ಟೆಸ್ಟ್ ಇನಿಂಗ್ಸ್ ಆಡಿರುವ ಸ್ಮಿತ್ ಒಟ್ಟು 11 ಶತಕ ಬಾರಿಸಿ ಈ ವಿಶೇಷ ದಾಖಲೆ ನಿರ್ಮಿಸಿದ್ದರು.

2 / 5
ಆದರೀಗ ಸ್ಮಿತ್ ದಾಖಲೆಯನ್ನು ಮುರಿದು ಜೋ ರೂಟ್ ಅಗ್ರಸ್ಥಾನಕ್ಕೇರಿದ್ದಾರೆ. ಜೋ ರೂಟ್ ಭಾರತದ ವಿರುದ್ಧ ಈವರೆಗೆ 62 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಬರೋಬ್ಬರಿ 12 ಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಅತ್ಯಧಿಕ ಸೆಂಚುರಿ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದ್ದಾರೆ.

3 / 5
ಅಷ್ಟೇ ಅಲ್ಲದೆ ಭಾರತ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ಕೂಡ ಜೋ ರೂಟ್ ಹೆಸರಿನಲ್ಲಿತ್ತು. ಟೀಮ್ ಇಂಡಿಯಾ ವಿರುದ್ಧ ಆಡಿದ 62 ಇನಿಂಗ್ಸ್​ಗಳ ಮೂಲಕ ರೂಟ್ ಈವರೆಗೆ ಕಲೆಹಾಕಿರುವುದು ಬರೋಬ್ಬರಿ 3249 ರನ್​ಗಳು. ರೂಟ್ ಅವರನ್ನು ಹೊರತುಪಡಿಸಿ ಭಾರತದ ಅಥವಾ ಇಂಗ್ಲೆಂಡ್​ನ ಇನ್ಯಾವುದೇ ಬ್ಯಾಟರ್ 3000 ರನ್​ಗಳ ಗಡಿದಾಟಿಲ್ಲ ಎಂಬುದು ವಿಶೇಷ.

4 / 5
ಸದ್ಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನದಲ್ಲಿದ್ದು, ಅಗ್ರಸ್ಥಾನಕ್ಕೇರಲು ಇನ್ನು ಕೇವಲ 2513 ರನ್​ಗಳು ಮಾತ್ರ ಬೇಕಿದೆ. ಸದ್ಯ  15921 ರನ್​ಗಳೊಂದಿಗೆ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನ್ಕದಲ್ಲಿ ಜೋ ರೂಟ್ ಈ ವಿಶ್ವ ದಾಖಲೆಯನ್ನು ಮುರಿಯಲಿದ್ದಾರಾ ಕಾದು ನೋಡಬೇಕಿದೆ.

5 / 5
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ

ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್

ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ

ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..

ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ

ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?