Joe Root: ರೂಟ್ ಕ್ಲಿಯರ್… ಸಚಿನ್ ವಿಶ್ವ ದಾಖಲೆ ಶೇಕಿಂಗ್
India vs England 4th Test: ಮ್ಯಾಂಚೆಸ್ಟರ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 358 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಭರ್ಜರಿ ಶತಕದೊಂದಿಗೆ 3ನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 544 ರನ್ಗಳಿಸಿದೆ.
Updated on: Jul 26, 2025 | 7:24 AM

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿರುವ ಟೆಸ್ಟ್ ಕ್ರಿಕೆಟ್ನ ಸಾರ್ವಕಾಲಿಕ ದಾಖಲೆಯೊಂದು ಶೀಘ್ರದಲ್ಲೇ ಪತನಗೊಳ್ಳುವ ಮುನ್ಸೂಚನೆ ಸಿಗುತ್ತಿದೆ. ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್, ಸಚಿನ್ ಅವರ 'ಅತಿ ಹೆಚ್ಚು ಟೆಸ್ಟ್ ರನ್'ಗಳ ಬೃಹತ್ ವಿಶ್ವ ದಾಖಲೆಯನ್ನು ಅಳಿಸಿ ಹಾಕುವತ್ತ ಹೆಜ್ಜೆಯನ್ನಿಟ್ಟಿದ್ದಾರೆ. (PC: Gettyimages)

ಜೋ ರೂಟ್ ಇನ್ನೆರಡು ವರ್ಷಗಳಲ್ಲಿ 14 ಟೆಸ್ಟ್ ಪಂದ್ಯಗಳನ್ನಾಡಲಿದ್ದಾರೆ. ಈ ಹದಿನಾಲ್ಕು ಟೆಸ್ಟ್ ಮ್ಯಾಚ್ಗಳ ಮೂಲಕ ಒಟ್ಟು 28 ಇನಿಂಗ್ಸ್ ಆಡಲು ಅವಕಾಶ ದೊರೆಯಬಹುದು. ಈ ಇಪ್ಪತ್ತೆಂಟು ಇನಿಂಗ್ಸ್ಗಳ ಮೂಲಕ ರೂಟ್ ಕೇವಲ 1,847 ರನ್‌ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. (PC: Gettyimages)

ಟೆಸ್ಟ್ ಕ್ರಿಕೆಟ್ನಲ್ಲಿ ಈವರೆಗೆ 165 ಪಂದ್ಯಗಳ 302 ಇನ್ನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 14,075 ರನ್ ಕಲೆಹಾಕಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಬಳಿಕ ಟೆಸ್ಟ್ ಕ್ರಿಕೆಟ್ನಲ್ಲಿ 14 ಸಾವಿರ ರನ್ ಕಲೆಹಾಕಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇನ್ನು ಮುಂದಿನ 14 ಟೆಸ್ಟ್ ಪಂದ್ಯಗಳ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ರೂಟ್ಗೆ ಉತ್ತಮ ಅವಕಾಶವಿದೆ. (PC: Gettyimages)

ಟೆಸ್ಟ್ ಕ್ರಿಕೆಟ್ನಲ್ಲಿ 200 ಪಂದ್ಯಗಳಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. (PC: Gettyimages)

ಅಂದರೆ 14 ಟೆಸ್ಟ್ ಪಂದ್ಯಗಳ 28 ಇನಿಂಗ್ಸ್ಗಳ ಲೆಕ್ಕಾಚಾರ ತೆಗೆದುಕೊಂಡರೆ ಜೋ ರೂಟ್ 65 ರ ಸರಾಸರಿಯಲ್ಲಿ ರನ್ ಕಲೆಹಾಕಿದರೆ ಅಗ್ರಸ್ಥಾನಕ್ಕೇರಬಹುದು. ಒಂದು ವೇಳೆ ಜೋ ರೂಟ್ 2028 ರಲ್ಲೂ ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆದರೆ ಸುಲಭವಾಗಿ ಸಚಿನ್ ತೆಂಡೂಲ್ಕರ್ ಅವರ ಬೃಹತ್ ರನ್ಗಳನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರುವುದನ್ನು ಎದುರು ನೋಡಬಹುದು. (PC: Gettyimages)




