Joe Root: ರೂಟ್ ಕ್ಲಿಯರ್… ಸಚಿನ್ ವಿಶ್ವ ದಾಖಲೆ ಶೇಕಿಂಗ್

Updated on: Jul 26, 2025 | 7:24 AM

India vs England 4th Test: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ತಂಡವು ಜೋ ರೂಟ್ ಅವರ ಭರ್ಜರಿ ಶತಕದೊಂದಿಗೆ 3ನೇ ದಿನದಾಟದ ಅಂತ್ಯಕ್ಕೆ 7 ವಿಕೆಟ್​​ ಕಳೆದುಕೊಂಡು 544 ರನ್​ಗಳಿಸಿದೆ.

1 / 5
ಭಾರತದ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟರ್ ಜೋ ರೂಟ್ (Joe Root) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್, ಜಾಕ್ಸ್ ಕಾಲಿಸ್ ಹಾಗೂ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಇದರೊಂದಿಗೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯ ಸನಿಹಕ್ಕೆ ತಲುಪಿದ್ದಾರೆ.

2 / 5
ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್​ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಜೋ ರೂಟ್ 150 ರನ್​ಗಳ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಜೋ ರೂಟ್ 5ನೇ ಸ್ಥಾನದಲ್ಲಿದ್ದರು.

3 / 5
ಇದೀಗ 150 ರನ್​ ಕಲೆಹಾಕುವುದರೊಂದಿಗೆ ಜೋ ರೂಟ್ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ರಿಕಿ ಪಾಂಟಿಂಗ್ (13378), ಜಾಕ್ಸ್ ಕಾಲಿಸ್ (13289) ಹಾಗೂ ರಾಹುಲ್ (13288) ಅವರನ್ನು ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ್ದಾರೆ. ಸದ್ಯ ಜೋ ರೂಟ್ ಮುಂದಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮಾತ್ರ. 

4 / 5
200 ಟೆಸ್ಟ್ ಪಂದ್ಯಗಳ ಮೂಲಕ 329 ಇನಿಂಗ್ಸ್​ ಆಡಿರುವ ಸಚಿನ್ ತೆಂಡೂಲ್ಕರ್ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ಜೋ ರೂಟ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
157 ಟೆಸ್ಟ್ ಪಂದ್ಯಗಳಲ್ಲಿ 286 ಇನಿಂಗ್ಸ್ ಆಡಿರುವ ಜೋ ರೂಟ್ 38 ಶತಕ ಹಾಗೂ 66 ಅರ್ಧಶತಕಗಳೊಂದಿಗೆ ಒಟ್ಟು 13409 ರನ್ ಕಲೆಹಾಕಿದ್ದಾರೆ. ಇನ್ನು ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲು ರೂಟ್​ಗೆ ಬೇಕಿರುವುದು ಕೇವಲ 2513 ರನ್​ಗಳು ಮಾತ್ರ. ಪ್ರಸ್ತುತ ಫಾರ್ಮ್ ಮುಂದುವರೆಸಿದರೆ ಜೋ ರೂಟ್ ಹೊಸ ಇತಿಹಾಸ ನಿರ್ಮಿಸುವುದು ಖಚಿತ.