Joe Root: ಜೋ ರೂಟ್ ಭರ್ಜರಿ ಸೆಂಚುರಿ: ಮುಂದುವರೆದ ದಾಖಲೆಯ ನಾಗಾಲೋಟ

Joe Root Records: ಜೋ ರೂಟ್ ಟೆಸ್ಟ್​ ಕ್ರಿಕೆಟ್​ನಲ್ಲಿ 32ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ. ಹಾಗೆಯೇ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಮಾಜಿ ನಾಯಕ ಅಲಿಸ್ಟರ್ ಕುಕ್.

|

Updated on: Jul 22, 2024 | 7:55 AM

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್​ನ ಸ್ಟಾರ್ ಬ್ಯಾಟರ್ ಜೋ ರೂಟ್ (Joe Root) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ನಾಟಿಂಗ್​ಹ್ಯಾಮ್​ ಟ್ರೆಂಟ್ ಬಿಡ್ಜ್​ ಮೈದಾನದಲ್ಲಿ ನಡೆದ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ 178 ಎಸೆತಗಳನ್ನು ಎದುರಿಸಿದ ರೂಟ್ 122 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಜೋ ರೂಟ್ 8ನೇ ಸ್ಥಾನಕ್ಕೇರಿದ್ದಾರೆ.

1 / 5
ಇದಕ್ಕೂ ಮುನ್ನ 8ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಶಿವನಾರಾಯಣ್ ಚಂದ್ರಪಾಲ್ ಇದ್ದರು. 280 ಟೆಸ್ಟ್ ಇನಿಂಗ್ಸ್​ಗಳನ್ನಾಡಿರುವ ಚಂದ್ರಪಾಲ್ 30 ಶತಕ ಹಾಗೂ 66 ಅರ್ಧಶತಕಗಳೊಂದಿಗೆ ಒಟ್ಟು 11867 ರನ್ ಕಲೆಹಾಕಿದ್ದಾರೆ. ಇದೀಗ ಚಂದ್ರಪಾಲ್ ಅವರ ರನ್​ಗಳಿಕೆಯನ್ನು ಹಿಂದಿಕ್ಕಿ ಜೋ ರೂಟ್ ಮುಂದಕ್ಕೆ ಸಾಗಿದ್ದಾರೆ.

2 / 5
ಇಂಗ್ಲೆಂಡ್ ಪರ 142 ಟೆಸ್ಟ್​ಗಳಲ್ಲಿ 260 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 21083	ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 32 ಶತಕ ಹಾಗೂ 62 ಅರ್ಧಶತಕಗಳೊಂದಿಗೆ 11940 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 8ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಹಾಗೆಯೇ ಟೆಸ್ಟ್ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಅತೀ ಹೆಚ್ಚು ರನ್ ಬಾರಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಜಿ ನಾಯಕ ಅಲಿಸ್ಟರ್ ಕುಕ್. ಇಂಗ್ಲೆಂಡ್ ಪರ 291 ಇನಿಂಗ್ಸ್ ಆಡಿರುವ ಕುಕ್ ಒಟ್ಟು 12472 ರನ್ ಬಾರಿಸಿದ್ದಾರೆ. ಇದೀಗ 11940 ರನ್ ಕಲೆಹಾಕಿರುವ ರೂಟ್​ಗೆ ಕುಕ್ ದಾಖಲೆ ಮುರಿಯಲು ಬೇಕಿರುವುದು ಕೇವಲ 532 ರನ್​ಗಳು ಮಾತ್ರ. ಹೀಗಾಗಿ ಮುಂಬರುವ ಸರಣಿಗಳ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸುವ ನಿರೀಕ್ಷೆಯಿದೆ.

4 / 5
ಇನ್ನು ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ವಿಶ್ವ ದಾಖಲೆ ಇರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಎಂಬುದು ವಿಶೇಷ. ಟೀಮ್ ಇಂಡಿಯಾ ಪರ 200 ಟೆಸ್ಟ್ ಪಂದ್ಯಗಳಲ್ಲಿ 329 ಇನಿಂಗ್ಸ್​ ಆಡಿರುವ ಸಚಿನ್ 51 ಶತಕ ಹಾಗೂ 68 ಅರ್ಧಶತಕಗಳೊಂದಿಗೆ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 5
Follow us
ರೇಣುಕಾಸ್ವಾಮಿ ಶವ ಎಸೆದ ಕಿಡಿಗೇಡಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ

ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ

ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ

ಫುಟ್ಬಾಲ್​ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕ್ರಿಸ್ಟಿಯಾನೊ ರೊನಾಲ್ಡೊ

181 ರನ್ ಸಿಡಿಸಿ ಕ್ರಿಕೆಟ್ ದೇವರ ದಾಖಲೆ ಮುರಿದ ಮುಶೀರ್ ಖಾನ್

ಹಬ್ಬಕ್ಕೆಂದು ಬೆಂಗಳೂರು ಬಿಟ್ಟು ಊರಿನತ್ತ ಹೊರಟ ಜನ: ಮೆಜೆಸ್ಟಿಕ್​ ಫುಲ್ ರಶ್

ವಿಜಯವಾಡದಲ್ಲಿ ಭಾರೀ ಪ್ರವಾಹ; ಬುಡಮೇರು ಬಳಿ ಮುಳುಗಿದ ಗ್ರಾಮಗಳು

ಹೇಮಾ ಸಮಿತಿ ರೀತಿ ಕನ್ನಡದಲ್ಲೂ ಆಗಬೇಕು ಎಂಬ ಮಾತಿಗೆ ರಕ್ಷಿತ್ ಪ್ರತಿಕ್ರಿಯೆ

ಬೈಕ್‌ನಲ್ಲಿದ್ದಾಗ ರಸ್ತೆ ಗುಂಡಿಗೆ ಬಿದ್ದು ಪರದಾಡಿದ ಡೆಲಿವರಿ ಬಾಯ್

ಬೆಂಗಳೂರು: ಇನ್​ಸ್ಟಾಗ್ರಾಮ್ ಸ್ಟಾರ್ ‘ಯೂನೀಸ್ ಝರೂರಾ’ ಪೊಲೀಸ್ ವಶಕ್ಕೆ