Joe Root: ಜೋ ರೂಟ್ ಭರ್ಜರಿ ಸೆಂಚುರಿ: ಮುಂದುವರೆದ ದಾಖಲೆಯ ನಾಗಾಲೋಟ
Joe Root Records: ಜೋ ರೂಟ್ ಟೆಸ್ಟ್ ಕ್ರಿಕೆಟ್ನಲ್ಲಿ 32ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿದ್ದಾರೆ. ಹಾಗೆಯೇ ಇಂಗ್ಲೆಂಡ್ ಪರ ಟೆಸ್ಟ್ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ನ ಮಾಜಿ ನಾಯಕ ಅಲಿಸ್ಟರ್ ಕುಕ್.
1 / 5
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ನ ಸ್ಟಾರ್ ಬ್ಯಾಟರ್ ಜೋ ರೂಟ್ (Joe Root) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ನಾಟಿಂಗ್ಹ್ಯಾಮ್ ಟ್ರೆಂಟ್ ಬಿಡ್ಜ್ ಮೈದಾನದಲ್ಲಿ ನಡೆದ ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 178 ಎಸೆತಗಳನ್ನು ಎದುರಿಸಿದ ರೂಟ್ 122 ರನ್ ಬಾರಿಸಿದ್ದಾರೆ. ಈ ಶತಕದೊಂದಿಗೆ ಟೆಸ್ಟ್ ರನ್ ಸರದಾರರ ಪಟ್ಟಿಯಲ್ಲಿ ಜೋ ರೂಟ್ 8ನೇ ಸ್ಥಾನಕ್ಕೇರಿದ್ದಾರೆ.
2 / 5
ಇದಕ್ಕೂ ಮುನ್ನ 8ನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ನ ಶಿವನಾರಾಯಣ್ ಚಂದ್ರಪಾಲ್ ಇದ್ದರು. 280 ಟೆಸ್ಟ್ ಇನಿಂಗ್ಸ್ಗಳನ್ನಾಡಿರುವ ಚಂದ್ರಪಾಲ್ 30 ಶತಕ ಹಾಗೂ 66 ಅರ್ಧಶತಕಗಳೊಂದಿಗೆ ಒಟ್ಟು 11867 ರನ್ ಕಲೆಹಾಕಿದ್ದಾರೆ. ಇದೀಗ ಚಂದ್ರಪಾಲ್ ಅವರ ರನ್ಗಳಿಕೆಯನ್ನು ಹಿಂದಿಕ್ಕಿ ಜೋ ರೂಟ್ ಮುಂದಕ್ಕೆ ಸಾಗಿದ್ದಾರೆ.
3 / 5
ಇಂಗ್ಲೆಂಡ್ ಪರ 142 ಟೆಸ್ಟ್ಗಳಲ್ಲಿ 260 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 21083 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 32 ಶತಕ ಹಾಗೂ 62 ಅರ್ಧಶತಕಗಳೊಂದಿಗೆ 11940 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವದ 8ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.
4 / 5
ಹಾಗೆಯೇ ಟೆಸ್ಟ್ ಕ್ರಿಕೆಟ್ನಲ್ಲಿ ಇಂಗ್ಲೆಂಡ್ ಪರ ಅತೀ ಹೆಚ್ಚು ರನ್ ಬಾರಿಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಜಿ ನಾಯಕ ಅಲಿಸ್ಟರ್ ಕುಕ್. ಇಂಗ್ಲೆಂಡ್ ಪರ 291 ಇನಿಂಗ್ಸ್ ಆಡಿರುವ ಕುಕ್ ಒಟ್ಟು 12472 ರನ್ ಬಾರಿಸಿದ್ದಾರೆ. ಇದೀಗ 11940 ರನ್ ಕಲೆಹಾಕಿರುವ ರೂಟ್ಗೆ ಕುಕ್ ದಾಖಲೆ ಮುರಿಯಲು ಬೇಕಿರುವುದು ಕೇವಲ 532 ರನ್ಗಳು ಮಾತ್ರ. ಹೀಗಾಗಿ ಮುಂಬರುವ ಸರಣಿಗಳ ಮೂಲಕ ಜೋ ರೂಟ್ ಹೊಸ ಇತಿಹಾಸ ನಿರ್ಮಿಸುವ ನಿರೀಕ್ಷೆಯಿದೆ.
5 / 5
ಇನ್ನು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ಇರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿ ಎಂಬುದು ವಿಶೇಷ. ಟೀಮ್ ಇಂಡಿಯಾ ಪರ 200 ಟೆಸ್ಟ್ ಪಂದ್ಯಗಳಲ್ಲಿ 329 ಇನಿಂಗ್ಸ್ ಆಡಿರುವ ಸಚಿನ್ 51 ಶತಕ ಹಾಗೂ 68 ಅರ್ಧಶತಕಗಳೊಂದಿಗೆ ಒಟ್ಟು 15921 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.