Joe Root Records: ಟೆಸ್ಟ್ ಕ್ರಿಕೆಟ್ನಲ್ಲಿ ಜೋ ರೂಟ್ ದರ್ಬಾರ್ ಮುಂದುವರೆದಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ರೂಟ್ 12 ಸಾವಿರ ರನ್ ಪೂರೈಸಿದ್ದು, ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಟೆಸ್ಟ್ ಕ್ರಿಕೆಟ್ ಸರದಾರರ ಪಟ್ಟಿಯಲ್ಲೂ ಜೋ ರೂಟ್ ಮುನ್ನುಗ್ಗುತ್ತಿದ್ದು, ಹೀಗಾಗಿ ಮುಂಬರುವ ದಿನಗಳಲ್ಲಿ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.