AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್​ರ ಮತ್ತೊಂದು ವಿಶ್ವ ದಾಖಲೆ ಮುರಿದ ಜೋ ರೂಟ್!

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೇವಲ 8 ಬ್ಯಾಟರ್​ಗಳು ಮಾತ್ರ 23 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ್ದಾರೆ. ಈ ಸಾಧನೆ ಮಾಡಿದ ಎಂಟನೇ ದಾಂಡಿಗ ಜೋ ರೂಟ್. ಈ ಮೂಲಕ ಇಂತಹದೊಂದು ಮೈಲುಗಲ್ಲು ಮುಟ್ಟಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಕೂಡ ರೂಟ್ ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 23, 2026 | 7:48 AM

Share
ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್ ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಈ ಬಾರಿ ಕೂಡ ದಾಖಲೆ ಬರೆದಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: GettyImages)

1 / 6
ಚೆಸ್ಟರ್-ಲೆ-ಸ್ಟ್ರೀಟ್​ನ ರಿವರ್​ ಸೈಡ್ ಮೈದಾನದಲ್ಲಿ ನಡೆದ ಇಂಗ್ಲೆಂಡ್​ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 44 ರನ್ ಬಾರಿಸಿದರು. ಈ ನಲ್ವತ್ತ ನಾಲ್ಕು ರನ್​ಗಳೊಂದಿಗೆ ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 23 ಸಾವಿರ ರನ್​ಗಳನ್ನು ಪೂರೈಸಿದ್ದಾರೆ. (PC: GettyImages)

2 / 6
ಈ ಮೂಲಕ ಅಂತರಾಆಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಂತ ವೇಗವಾಗಿ 23000 ರನ್ ಕಲೆಹಾಕಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕಾಣಿಸಿಕೊಂಡಿದ್ದರು. (PC: GettyImages)

3 / 6
ಸಚಿನ್ ತೆಂಡೂಲ್ಕರ್ 522 ಇನಿಂಗ್ಸ್​ಗಳ ಮೂಲಕ 23 ಸಾವಿರ ರನ್ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 23 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ರೂಟ್ ಮುರಿದಿದ್ದಾರೆ. (PC: GettyImages)

4 / 6
ಇಂಗ್ಲೆಂಡ್ ಪರ ಈವರೆಗೆ 521 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 23041 ರನ್ ಕಲೆಹಾಕಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 23 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್​ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: GettyImages)

5 / 6
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಕೇವಲ 490 ಇನಿಂಗ್ಸ್​ಗಳ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 23 ಸಾವಿರ ರನ್ ಪೂರೈಸಿ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ. (PC: GettyImages)

6 / 6
Follow Us
ಜಾತಿನಿಂದನೆ ಆರೋಪ; ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು ಎಫ್​ಐಆರ್

ಕಾವೇರಿ ನೀರು ಹಂಚಿಕೆ: ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆ

ಇಂದು ಶ್ರವಣ ದ್ವಾದಶಿ: ಮೇಷಾದಿ 12 ರಾಶಿಗಳ ಜನರ ದಿನ ಭವಿಷ್ಯ ಇಲ್ಲಿದೆ

'ನಮ್ಮ ಉಗ್ರರು ನಿಯಂತ್ರಣದಲ್ಲಿದ್ದಾರೆ'; ಮಾನ ಹರಾಜು ಹಾಕಿಕೊಂಡ ಪಾಕಿಸ್ತಾನ

: ಟಿವಿ9 ವರದಿಯ ಸಕಾರಾತ್ಮಕ ಪರಿಣಾಮಕ್ಕೆ ಗದಗ ಪೋಷಕರ ಧನ್ಯವಾದ

‘ಭಾರತ-ಪಾಕ್ ಯುದ್ಧ ತಡೆದು, 3 ಕೋಟಿ ಜನರ ಜೀವ ಉಳಿಸಿದೆ’; ಟ್ರಂಪ್ ಹಳೇ ರಾಗ

ಸಿದ್ದರಾಮಯ್ಯ ಪ್ಯಾಲೇಸ್ ಕಟ್ಟಿಲ್ಲ: ಹೊಸ ಮನೆ ಬಗ್ಗೆ ಜಮೀರ್ ಹೇಳಿದ್ದಿಷ್ಟು

ಗುಲ್ಮಾರ್ಗ್‌ನಲ್ಲಿ ಹಿಮಪಾತ; ಶ್ವೇತವರ್ಣಕ್ಕೆ ತಿರುಗಿದ ಪರ್ವತಗಳು

ಗನ್, ಪಿಸ್ತೂಲ್ ಹೊಂದಿರುವವರಿಗೆ ಖಡಕ್ ಸಂದೇಶ ನೀಡಿದ ಸಿಎಂ ಡಿಕೆ ಶಿವಕುಮಾರ್

‘ಮುಖ್ಯಮಂತ್ರಿ’ ನಾಟಕದ 900ನೇ ಪ್ರದರ್ಶನ: ಮೈಲುಗಲ್ಲಿನ ಬಗ್ಗೆ ಚಂದ್ರು ಮಾತು