
ಇಂಗ್ಲೆಂಡ್ ತಂಡದ ಅನುಭವಿ ಬ್ಯಾಟರ್ ಜೋ ರೂಟ್ ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಈ ಬಾರಿ ಕೂಡ ದಾಖಲೆ ಬರೆದಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: GettyImages)
ಚೆಸ್ಟರ್-ಲೆ-ಸ್ಟ್ರೀಟ್ನ ರಿವರ್ ಸೈಡ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋ ರೂಟ್ 44 ರನ್ ಬಾರಿಸಿದರು. ಈ ನಲ್ವತ್ತ ನಾಲ್ಕು ರನ್ಗಳೊಂದಿಗೆ ರೂಟ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 23 ಸಾವಿರ ರನ್ಗಳನ್ನು ಪೂರೈಸಿದ್ದಾರೆ. (PC: GettyImages)
ಈ ಮೂಲಕ ಅಂತರಾಆಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಂತ ವೇಗವಾಗಿ 23000 ರನ್ ಕಲೆಹಾಕಿದ ವಿಶ್ವದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕಾಣಿಸಿಕೊಂಡಿದ್ದರು. (PC: GettyImages)
ಸಚಿನ್ ತೆಂಡೂಲ್ಕರ್ 522 ಇನಿಂಗ್ಸ್ಗಳ ಮೂಲಕ 23 ಸಾವಿರ ರನ್ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 23 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ರೂಟ್ ಮುರಿದಿದ್ದಾರೆ. (PC: GettyImages)
ಇಂಗ್ಲೆಂಡ್ ಪರ ಈವರೆಗೆ 521 ಇನಿಂಗ್ಸ್ ಆಡಿರುವ ಜೋ ರೂಟ್ ಒಟ್ಟು 23041 ರನ್ ಕಲೆಹಾಕಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ವೇಗವಾಗಿ 23 ಸಾವಿರ ರನ್ ಕಲೆಹಾಕಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: GettyImages)
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ. ಕಿಂಗ್ ಕೊಹ್ಲಿ ಕೇವಲ 490 ಇನಿಂಗ್ಸ್ಗಳ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 23 ಸಾವಿರ ರನ್ ಪೂರೈಸಿ ವಿಶ್ವ ದಾಖಲೆ ಬರೆದಿಟ್ಟಿದ್ದಾರೆ. (PC: GettyImages)