ENG vs PAK: ಟೆಸ್ಟ್ ಕ್ರಿಕೆಟ್​ನಲ್ಲಿ ದಿಗ್ಗಜರ ದಾಖಲೆ ಮುರಿದ ರೂಟ್

Updated on: Aug 28, 2026 | 7:26 PM

Joe Root's Historic Test Feat: ಲಾರ್ಡ್ಸ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ನಾಯಕ ಜೋ ರೂಟ್ ಇತಿಹಾಸ ಸೃಷ್ಟಿಸಿದ್ದಾರೆ. 168 ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ರಿಕಿ ಪಾಂಟಿಂಗ್ ದಾಖಲೆಯನ್ನು ಸರಿಗಟ್ಟಿದ ಅವರು, ಟೆಸ್ಟ್ ರನ್‌ಗಳಲ್ಲಿ ಪಾಂಟಿಂಗ್ ಮತ್ತು ಸ್ಟೀವ್ ವಾ ಅವರನ್ನು ಹಿಂದಿಕ್ಕಿ 14,184 ರನ್‌ ಗಳಿಸಿದ್ದಾರೆ. ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದವರಲ್ಲಿ ಸಚಿನ್ ತೆಂಡೂಲ್ಕರ್ ನಂತರ ಎರಡನೇ ಸ್ಥಾನದಲ್ಲಿರುವ ರೂಟ್, ಸಚಿನ್ ಅವರ ದಾಖಲೆ ಮುರಿಯುವ ಅವಕಾಶ ಹೊಂದಿದ್ದಾರೆ.

1 / 5
ಪ್ರಸ್ತುತ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಜೋ ರೂಟ್ ಇತಿಹಾಸ ಸೃಷ್ಟಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡುವ ಅಪರೂಪದ ಮೈಲಿಗಲ್ಲು ಸಾಧಿಸುವುದರ ಜೊತೆಗೆ, ಅವರು ಸಚಿನ್ ತೆಂಡೂಲ್ಕರ್ ಮತ್ತು ರಿಕಿ ಪಾಂಟಿಂಗ್‌ರಂತಹ ದಿಗ್ಗಜರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ(PC-PTI).

ಪ್ರಸ್ತುತ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ಟೆಸ್ಟ್ ತಂಡದ ನಾಯಕ ಜೋ ರೂಟ್ ಇತಿಹಾಸ ಸೃಷ್ಟಿಸಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡುವ ಅಪರೂಪದ ಮೈಲಿಗಲ್ಲು ಸಾಧಿಸುವುದರ ಜೊತೆಗೆ, ಅವರು ಸಚಿನ್ ತೆಂಡೂಲ್ಕರ್ ಮತ್ತು ರಿಕಿ ಪಾಂಟಿಂಗ್‌ರಂತಹ ದಿಗ್ಗಜರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ(PC-PTI).

2 / 5

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯವು ಜೋ ರೂಟ್ ಅವರ ವೃತ್ತಿಜೀವನದ 168 ನೇ ಟೆಸ್ಟ್ ಪಂದ್ಯವಾಗಿದೆ. ಈ ಪಂದ್ಯದೊಂದಿಗೆ, ಅವರು ಆಸ್ಟ್ರೇಲಿಯಾದ ಮಾಜಿ ನಾಯಕರಾದ ರಿಕಿ ಪಾಂಟಿಂಗ್ ಮತ್ತು ಸ್ಟೀವ್ ವಾ ಆಡಿದ 168 ಟೆಸ್ಟ್‌ಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಇದಲ್ಲದೆ ತಂಡದ ಸಹ ಆಟಗಾರ ಸ್ಟುವರ್ಟ್ ಬ್ರಾಡ್ ಅವರನ್ನು ಹಿಂದಿಕ್ಕಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯಲ್ಲಿ ಟಾಪ್ -5 ರಲ್ಲಿ ಸ್ಥಾನ ಪಡೆದಿದ್ದಾರೆ(PC-PTI).

3 / 5

ಆದಾಗ್ಯೂ, ಟೆಸ್ಟ್ ರನ್‌ಗಳ ವಿಷಯದಲ್ಲಿ ರೂಟ್, ರಿಕಿ ಪಾಂಟಿಂಗ್ ಮತ್ತು ಸ್ಟೀವ್ ವಾ ಇಬ್ಬರನ್ನೂ ಹಿಂದಿಕ್ಕಿದ್ದಾರೆ. ರಿಕಿ ಪಾಂಟಿಂಗ್ 13,378 ರನ್‌ ಬಾರಿಸಿದ್ದರೆ, ಸ್ಟೀವ್ ವಾ 10,927 ರನ್‌ ಕಲೆಹಾಕಿದ್ದಾರೆ. ರೂಟ್ ಇದುವರೆಗೆ 14,184 ರನ್‌ ಬಾರಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಸಚಿನ್ ತೆಂಡೂಲ್ಕರ್ ನಂತರ ರೂಟ್ ಎರಡನೇ ಸ್ಥಾನದಲ್ಲಿದ್ದಾರೆ(PC-PTI).

4 / 5

ಇನ್ನು ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಅಡಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 200 ಪಂದ್ಯಗಳನ್ನು ಆಡಿದ ಏಕೈಕ ಕ್ರಿಕೆಟಿಗರಾಗಿದ್ದಾರೆ. ಸಚಿನ್ ಅವರ ಮೈಲಿಗಲ್ಲನ್ನು ಮೀರಲು ರೂಟ್ ಇನ್ನೂ 32 ಟೆಸ್ಟ್ ಪಂದ್ಯಗಳನ್ನು ಆಡಬೇಕಾಗಿದೆ(PC-PTI).

5 / 5

ಇಂಗ್ಲೆಂಡ್ ಪ್ರತಿ ವರ್ಷ ಆಡುವ ಟೆಸ್ಟ್ ಪಂದ್ಯಗಳ ಸಂಖ್ಯೆಯನ್ನು ಗಮನಿಸಿದರೆ, ಅವರು ತಮ್ಮ ಫಿಟ್ನೆಸ್ ಅನ್ನು ಕಾಯ್ದುಕೊಂಡರೆ, ಮುಂದಿನ ಕೆಲವು ವರ್ಷಗಳಲ್ಲಿ ಸಚಿನ್ ಅವರ ಅತಿ ಹೆಚ್ಚು ಪಂದ್ಯಗಳು ಮತ್ತು ಅತಿ ಹೆಚ್ಚು ರನ್‌ಗಳ ದಾಖಲೆಗಳನ್ನು ಮುರಿಯುವ ಎಲ್ಲಾ ಅವಕಾಶಗಳನ್ನು ರೂಟ್ ಹೊಂದಿದ್ದಾರೆ(PC-PTI).

Loading...
Unable to load recommendations.
Follow Us