ತೀರಾ ಕಳಪೆ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಅಂತಿಮವಾಗಿ ಆಶಸ್ ಸರಣಿಯನ್ನು ಕಳೆದುಕೊಂಡಿದೆ. ಮಂಗಳವಾರ ನಡೆದ ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್ ತೀರ ಕಳಪೆಯಾಗಿತ್ತು. ಹೀಗಾಗಿ ಆಸ್ಟ್ರೇಲಿಯಾ ಮೂರನೇ ಪಂದ್ಯವನ್ನು ಇನ್ನಿಂಗ್ಸ್, 14 ರನ್‌ಗಳಿಂದ ಗೆದ್ದುಕೊಂಡಿತು. ಈ ಸೋಲಿನ ನಂತರ ಇಂಗ್ಲೆಂಡ್‌ನಲ್ಲಿ ನಾಯಕ ಜೋ ರೂಟ್ ನಾಯಕತ್ವದ ಬಗ್ಗೆ ಪ್ರಶ್ನಾರ್ಥಕ ಚಿಹ್ನೆಗಳು ಎದ್ದಿದ್ದು, ಸರಣಿ ಮುಗಿದ ತಕ್ಷಣ ಈ ಅನುಭವಿ ಬ್ಯಾಟ್ಸ್‌ಮನ್ ನಾಯಕತ್ವವನ್ನು ತೊರೆಯಲಿದ್ದಾರೆ ಎಂದು ವರದಿಯಾಗಿದೆ.