Updated on: Mar 26, 2023 | 11:13 PM
ಸೌತ್ ಆಫ್ರಿಕಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಾನ್ಸನ್ ಚಾರ್ಲ್ಸ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 39 ಎಸೆತಗಳಲ್ಲಿ ಸೆಂಚುರಿ ಪೂರೈಸುವ ಮೂಲಕ ಚಾರ್ಲ್ಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದರು.
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ಪರ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. ಯೂನಿವರ್ಸ್ ಬಾಸ್ ಗೇಲ್ ಇಂಗ್ಲೆಂಡ್ ವಿರುದ್ಧ ಕೇವಲ 47 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಜಾನ್ಸನ್ ಚಾರ್ಲ್ಸ್ ಮುರಿದಿದ್ದಾರೆ.
ಈ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಬಾರಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಚಾರ್ಲ್ಸ್ ತಮ್ಮದಾಗಿಸಿಕೊಂಡಿದ್ದಾರೆ. ಟಿ20 ಕ್ರಿಕೆಟ್ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ ಸೆಂಚುರಿ ಬಾರಿಸಿದ ವಿಶ್ವದ 6 ಬ್ಯಾಟ್ಸ್ಮನ್ಗಳ ಪಟ್ಟಿ ಈ ಕೆಳಗಿನಂತಿದೆ...
1- ಡೇವಿಡ್ ಮಿಲ್ಲರ್: 2017 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾದ ಡೇವಿಡ್ ಮಿಲ್ಲರ್ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.
2- ರೋಹಿತ್ ಶರ್ಮಾ: 2017 ರಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಡೇವಿಡ್ ಮಿಲ್ಲರ್ ಅವರ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದರು.
3- ಎಸ್ ವಿಕ್ರಮಶೇಖರ: 2019 ರಲ್ಲಿ ಜೆಕ್ ರಿಪಬ್ಲಿಕ್ ತಂಡದ ಆಟಗಾರ ಎಸ್ ವಿಕ್ರಮಶೇಖರ ಟರ್ಕಿ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಮೂಲಕ ಡೇವಿಡ್ ಮಿಲ್ಲರ್ ಹಾಗೂ ರೋಹಿತ್ ಶರ್ಮಾ ಬರೆದಿದ್ದ ದಾಖಲೆಯನ್ನು ಸರಿಗಟ್ಟಿದ್ದರು.
4- ಎಸ್ ಪೆರಿಯಾಳ್ವಾರ್: 2019 ರಲ್ಲಿ ರೊಮಾನಿಯಾ ತಂಡದ ಎಸ್ ಪೆರಿಯಾಳ್ವಾರ್ ಟರ್ಕಿ ವಿರುದ್ಧದ ಪಂದ್ಯದಲ್ಲಿ ಕೇವಲ 39 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದರು.
5- ಜೀಶನ್ ಕುಕಿಖೇಲ್: 2022 ರಲ್ಲಿ ಆಸ್ಟ್ರೀಯಾ ವಿರುದ್ಧದ ಪಂದ್ಯದಲ್ಲಿ ಹಂಗೇರಿ ಆಟಗಾರ ಜೀಶನ್ ಕುಕಿಖೇಲ್ ಕೇವಲ 39 ಎಸೆತಗಳಲ್ಲಿ ಶತಕ ಬಾರಿಸಿದ್ದರು.
6- ಜಾನ್ಸನ್ ಚಾರ್ಲ್ಸ್: 2023 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ನ ಜಾನ್ಸನ್ ಚಾರ್ಲ್ಸ್ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಈ ಮೂಲಕ 40 ಕ್ಕಿಂತ ಕಡಿಮೆ ಬಾಲ್ನಲ್ಲಿ ಶತಕ ಬಾರಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.