AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jonny Bairstow: ಶೂನ್ಯ ಶೂರ… ಸೊನ್ನೆ ಸುತ್ತಿ ಅನಗತ್ಯ ದಾಖಲೆ ಬರೆದ ಜಾನಿ ಬೈರ್​ಸ್ಟೋವ್

India vs England 3rd Test: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವುದರೊಂದಿಗೆ ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಜಾನಿ ಬೈರ್​ಸ್ಟೋವ್ ಅನಗತ್ಯ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಪಾಕಿಸ್ತಾನ್ ಕ್ರಿಕೆಟಿಗ ದಾನಿಶ್ ಕನೇರಿಯಾ ಹೆಸರಿನಲ್ಲಿದ್ದ ಕಳಪೆ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Edited By: |

Updated on:Feb 17, 2024 | 3:09 PM

Share
ರಾಜ್​ಕೋಟ್​ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟೆಸ್ಟ್​ ಪಂದ್ಯದಲ್ಲಿ ಜಾನಿ ಬೈರ್​ಸ್ಟೋವ್ ಶೂನ್ಯಕ್ಕೆ ಔಟಾಗಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬೈರ್​ಸ್ಟೋವ್ (0)  ಕುಲ್ದೀಪ್ ಯಾದವ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದ್ದರು.

1 / 6
ಇದರೊಂದಿಗೆ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಆಟಗಾರ ಎಂಬ ಅನಗತ್ಯ ದಾಖಲೆಯೊಂದು ಜಾನಿ ಬೈರ್​ಸ್ಟೋವ್ ಹೆಸರಿಗೆ ಸೇರ್ಪಡೆಯಾಯಿತು. ಇದಕ್ಕೂ ಮುನ್ನ ಈ ಕಳಪೆ ದಾಖಲೆ ಪಾಕ್ ಆಟಗಾರನ ಹೆಸರಿನಲ್ಲಿತ್ತು.

2 / 6
ಭಾರತದ ವಿರುದ್ಧ 15 ಟೆಸ್ಟ್ ಇನಿಂಗ್ಸ್ ಆಡಿರುವ ಪಾಕಿಸ್ತಾನ್ ಆಟಗಾರ ದಾನಿಶ್ ಕನೇರಿಯಾ 7 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಈ ಮೂಲಕ ಟೀಮ್ ಇಂಡಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಬಾರಿ ಸೊನ್ನೆ ಸುತ್ತಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 6
ಇದೀಗ ಈ ಕಳಪೆ ದಾಖಲೆಯನ್ನು ಜಾನಿ ಬೈರ್​ಸ್ಟೋವ್ ಮುರಿದಿದ್ದಾರೆ. ಭಾರತದ ವಿರುದ್ಧ ಇದುವರೆಗೆ 37 ಟೆಸ್ಟ್ ಇನಿಂಗ್ಸ್​ ಆಡಿರುವ ಬೈರ್​ಸ್ಟೋವ್ ಒಟ್ಟು 8 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ವಿರುದ್ಧದ ಶೂನ್ಯ ಶೂರ ಎನಿಸಿಕೊಂಡಿದ್ದಾರೆ.

4 / 6
ಇನ್ನು ಈ ಬಾರಿಯ ಸರಣಿಯಲ್ಲಿ ಜಾನಿ ಬೈರ್​ಸ್ಟೋವ್ ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಇದುವರೆಗೆ ಐದು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಜಾನಿಬಿ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಅಲ್ಲದೆ 5 ಇನಿಂಗ್ಸ್​ಗಳಿಂದ ಕಲೆಹಾಕಿರುವುದು ಕೇವಲ 98 ರನ್​ಗಳು ಮಾತ್ರ. ಹೀಗಾಗಿ ಮುಂದಿನ ಪಂದ್ಯದಿಂದ ಬೈರ್​ಸ್ಟೋವ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ.

5 / 6
IND vs ENG 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ (131) ಹಾಗೂ ರವೀಂದ್ರ ಜಡೇಜಾ (112) ಭರ್ಜರಿ ಶತಕ ಬಾರಿಸಿದ್ದರು. ಈ ಶತಕದ ನೆರವಿನಿಂದ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 445 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ನಲ್ಲಿ ಆಡಿರುವ ಇಂಗ್ಲೆಂಡ್​ ತಂಡವು ಬೆನ್ ಡಕೆಟ್ (153) ಅವರ ಶತಕದ ನೆರವಿನಿಂದ 319 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್ ಆಡುತ್ತಿದೆ.

6 / 6

Published On - 3:08 pm, Sat, 17 February 24

ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?

ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು