AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

402 ನಾಟೌಟ್… ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್

Jos Buttler Records: ಇಂಗ್ಲೆಂಡ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ದಾಟಿದ್ದಾರೆ. ಅದು ಕೂಡ ಲೆಜೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡಿದ ಹೆಗ್ಗಳಿಕೆ ಜೋಸ್ ಬಟ್ಲರ್ ಪಾಲಾಗಿದೆ.

ಝಾಹಿರ್ ಯೂಸುಫ್
|

Updated on: Feb 02, 2026 | 7:54 AM

Share
ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ (Jos Buttler) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡುವ ಮೂಲಕ. ಈ  ಮೂಲಕ ಆಂಗ್ಲರ ಪರ ಬಟ್ಲರ್ ಹೊಸ ದಾಖಲೆ ನಿರ್ಮಿಸಿದ್ದಾರೆ.

1 / 5
 ಪಲ್ಲೆಕೆಲ್ಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಜೋಸ್ ಬಟ್ಲರ್ ಇಂಗ್ಲೆಂಡ್ ಪತ ಅತ್ಯಧಿಕ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜೇಮ್ಸ್​ ಅ್ಯಂಡರ್ಸನ್ ಹೆಸರಿನಲ್ಲಿತ್ತು.

2 / 5
2002 ರಲ್ಲಿ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದ ಜೇಮ್ಸ್ ಅ್ಯಂಡರ್ಸನ್ ಇಂಗ್ಲೆಂಡ್ ಪರ ಬರೋಬ್ಬರಿ 401 ಪಂದ್ಯಗಳನ್ನಾಡಿದ್ದರು. ಈ ಮೂಲಕ ಆಂಗ್ಲರ ಪರ 400 ಕ್ಕಿಂತ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಏಕೈಕ ಆಟಗಾರನಾಗಿ ಹೊರಹೊಮ್ಮಿದ್ದರು.

3 / 5
ಇದೀಗ ಈ ದಾಖಲೆ ಮುರಿಯುವಲ್ಲಿ ಜೋಸ್ ಬಟ್ಲರ್ ಯಶಸ್ವಿಯಾಗಿದ್ದಾರೆ. 2011 ರಿಂದ ಇಂಟರ್​ನ್ಯಾಷನಲ್ ಮ್ಯಾಚ್ ಆಡುತ್ತಿರುವ ಬಟ್ಲರ್ ಈವರೆಗೆ 402* ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಅತ್ಯಧಿಕ ಅಂತಾರಾಷ್ಟ್ರೀಯ ಮ್ಯಾಚ್​ಗಳನ್ನಾಡಿದ ಆಟಗಾರ ಎನಿಸಿಕೊಂಡಿದ್ದಾರೆ.

4 / 5
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡುವ ಮೂಲಕ ಸಚಿನ್ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ 402 ಪಂದ್ಯಗಳೊಂದಿಗೆ ನಾಟೌಟ್ ಆಗಿರುವ ಬಟ್ಲರ್ ಮುಂದಿನ ವರ್ಷದವರೆಗೆ ಅಂತಾರಾಷ್ಟ್ರೀಯ ಕೆರಿಯರ್​ ಮುಂದುವರೆಸಬಹುದು. ಈ ಮೂಲಕ ಅವರು 450 ಕ್ಕಿಂತ ಹೆಚ್ಚಿನ ಪಂದ್ಯಗಳೊಂದಿಗೆ ಕೆರಿಯರ್ ಅಂತ್ಯಗೊಳಿಸುವ ನಿರೀಕ್ಷೆಯಿದೆ.

5 / 5
Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು

ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​

ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್

‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ

ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ

ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ

3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ

ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ

ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ

ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್