
ಟಿ20 ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ದಾಂಡಿಗ ಜೋಸ್ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಬಟ್ಲರ್ ಟಿ20 ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. (PC: Getty Images)

ದಿ ಹಂಡ್ರೆಡ್ ಲೀಗ್ನ 3ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದ ಜೋಸ್ ಬಟ್ಲರ್ 11 ಎಸೆತಗಳಲ್ಲಿ 16 ರನ್ ಬಾರಿಸಿದ್ದರು. ಈ ಹದಿನಾರು ರನ್ಗಳೊಂದಿಗೆ ಬಟ್ಲರ್ ತಮ್ಮ ಟಿ20 ರನ್ಗಳ ಸಂಖ್ಯೆಯನ್ನು 14,572 ಕ್ಕೇರಿಸಿದ್ದಾರೆ. ಈ ಮೂಲಕ ಗೇಲ್ ಹೆಸರಿನಲ್ಲಿದ್ದ ದಾಖಲೆ ಮುರಿದಿದ್ದಾರೆ. (PC: Getty Images)

ಟಿ20 ಕ್ರಿಕೆಟ್‌ನಲ್ಲಿ 455 ಇನಿಂಗ್ಸ್ ಆಡಿರುವ ಕ್ರಿಸ್ ಗೇಲ್ 10060 ಎಸೆತಗಳನ್ನು ಎದುರಿಸಿ ಒಟ್ಟು 14562 ರನ್ ಕಲೆಹಾಕಿದ್ದರು. ಈ ಮೂಲಕ ಚುಟುಕು ಕ್ರಿಕೆಟ್ ಕದನದಲ್ಲಿ ಅತ್ಯಧಿಕ ರನ್ ಪೇರಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಗೇಲ್ ಅವರ ಈ ಮೈಲುಗಲ್ಲನ್ನು ಮೀರಿ ಜೋಸ್ ಬಟ್ಲರ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. (PC: Getty Images)

ಚುಟುಕು ಕ್ರಿಕೆಟ್‌ನಲ್ಲಿ ಈವರೆಗೆ 487 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 9930 ಎಸೆತಗಳಲ್ಲಿ 14572 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್ ಕೀರನ್ ಪೊಲಾರ್ಡ್. (PC: Getty Images)

ಟಿ20 ಕ್ರಿಕೆಟ್‌ನಲ್ಲಿ ಈವರೆಗೆ 663 ಇನಿಂಗ್ಸ್ ಆಡಿರುವ ಕೀರನ್ ಪೊಲಾರ್ಡ್ 9802 ಎಸೆತಗಳಲ್ಲಿ 14803 ರನ್ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ಪೊಲಾರ್ಡ್ ಹಾಗೂ ಬಟ್ಲರ್ ನಡುವೆ ಪೈಪೋಟಿ ಮುಂದುವರೆದಿದ್ದು, ಇವರಿಬ್ಬರಲ್ಲಿ ಯಾರು ಮೊದಲಿಗೆ 15 ಸಾವಿರ ರನ್ ಪೂರೈಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. (PC: Getty Images)