ENG vs WI: ಕಿಂಗ್ ಕೊಹ್ಲಿ ದಾಖಲೆ ಮುರಿದ ರೋಹಿತ್ ದಾಖಲೆಯನ್ನು ಬೆನ್ನಟ್ಟಿದ ಜೋಸ್ ಬಟ್ಲರ್

Updated on: Jun 07, 2025 | 9:59 PM

Jos Buttler: ಜೂನ್ 6 ರಂದು ಚೆಸ್ಟರ್-ಲೀ-ಸ್ಟ್ರೀಟ್‌ನಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ 21 ರನ್‌ಗಳ ಅಂತರದಿಂದ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಜೋಸ್ ಬಟ್ಲರ್ 96 ರನ್‌ಗಳ ಅದ್ಭುತ ಇನ್ನಿಂಗ್ಸ್‌ ಆಡಿದರು. ಇದರೊಂದಿಗೆ ಬಟ್ಲರ್ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ರನ್ ಮತ್ತು ಅರ್ಧಶತಕ ಬಾರಿಸಿದ ದಾಖಲೆಯನ್ನು ಸೃಷ್ಟಿಸಿದ್ದಾರೆ.

1 / 6
ಜೂನ್ 6 ರಂದು ಚೆಸ್ಟರ್ ಲೀ ಸ್ಟ್ರೀಟ್‌ನಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಇಂಗ್ಲೆಂಡ್ 21 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಜೋಸ್ ಬಟ್ಲರ್ ಅವರ 96 ರನ್‌ಗಳ ಅದ್ಭುತ ಇನ್ನಿಂಗ್ಸ್‌ನ ಆಧಾರದ ಮೇಲೆ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 188 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ವಿಂಡೀಸ್ ತಂಡವು 20 ಓವರ್‌ಗಳಲ್ಲಿ 167 ರನ್‌ಗಳಿಸಲಷ್ಟೇ ಶಕ್ತವಾಯಿತು.

2 / 6
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್ ತಂಡವು 16 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ಇದರ ನಂತರ, 3 ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದ ಜೋಸ್ ಬಟ್ಲರ್, ಜೇಮೀ ಸ್ಮಿತ್ ಅವರೊಂದಿಗೆ ಎರಡನೇ ವಿಕೆಟ್‌ಗೆ 79 ರನ್‌ಗಳ ಅದ್ಭುತ ಪಾಲುದಾರಿಕೆಯನ್ನು ಮಾಡಿದರು.

3 / 6
ಬಟ್ಲರ್ ತನ್ನ 96 ರನ್ ಇನ್ನಿಂಗ್ಸ್‌ನಲ್ಲಿ ಒಟ್ಟು 59 ಎಸೆತಗಳನ್ನು ಎದುರಿಸಿ 6 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಇದರೊಂದಿಗೆ ಜೋಸ್ ಬಟ್ಲರ್, ವೆಸ್ಟ್ ಇಂಡೀಸ್ ವಿರುದ್ಧ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.

4 / 6
ವಿರಾಟ್ ಕೊಹ್ಲಿ ತಮ್ಮ ಟಿ20 ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 570 ರನ್ ಗಳಿಸಿದ್ದಾರೆ, ಆದರೆ ಈಗ ಜೋಸ್ ಬಟ್ಲರ್ ಒಟ್ಟು 611 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಹಿಟ್​ಮ್ಯಾನ್ ವಿಂಡೀಸ್ ತಂಡದ ವಿರುದ್ಧ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ 693 ರನ್ ಗಳಿಸಿದ್ದಾರೆ.

5 / 6
ಇದು ಮಾತ್ರವಲ್ಲದೆ ಜೋಸ್ ಬಟ್ಲರ್ ಈಗ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮತ್ತು ಬಾಬರ್ ಆಝಂ ಅವರನ್ನು ಸರಿಗಟ್ಟಿದ್ದಾರೆ. ರೋಹಿತ್ ಮತ್ತು ಬಾಬರ್ ಇಬ್ಬರೂ ವೆಸ್ಟ್ ಇಂಡೀಸ್ ವಿರುದ್ಧ ತಲಾ 5 ಅರ್ಧಶತಕಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿದ್ದಾರೆ

6 / 6
ಇದೀಗ ಈ ಪಟ್ಟಿಯಲ್ಲಿ ಬಟ್ಲರ್ ಕೂಡ ಜಂಟಿ ಸ್ಥಾನ ಪಡೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಡೇವಿಡ್ ವಾರ್ನರ್ ಅಗ್ರಸ್ಥಾನದಲ್ಲಿದ್ದು, ಅವರು ವೆಸ್ಟ್ ಇಂಡೀಸ್ ವಿರುದ್ಧ ಒಟ್ಟು 7 ಅರ್ಧಶತಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ.