ಭಲೇ ಬಟ್ಲರ್… ವಿಶ್ವ ದಾಖಲೆ ನಿರ್ಮಿಸಿದ ಜೋಸ್ ಬಟ್ಲರ್
Jos Buttler Records: ಟಿ20 ಕ್ರಿಕೆಟ್ನಲ್ಲಿ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ 13 ಸಾವಿರ ರನ್ ಕಲೆಹಾಕುವ ಮೂಲಕ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್ನ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್.
Updated on: Jul 19, 2025 | 11:53 AM

ಟಿ20 ಕ್ರಿಕೆಟ್ ಇತಿಹಾಸದಲ್ಲಿ 13 ಸಾವಿರ ರನ್ ಕಲೆಹಾಕಿರುವುದು ಕೇವಲ ಏಳು ಬ್ಯಾಟ್ಸ್ಮನ್ಗಳು ಮಾತ್ರ. ಈ ಏಳು ಬ್ಯಾಟರ್ಗಳಲ್ಲಿ ಕೊನೆಯ ಸ್ಥಾನದಲ್ಲಿರುವುದು ಜೋ ಬಟ್ಲರ್ (Jos Buttler). ಅಂದರೆ ಟಿ20 ಕ್ರಿಕೆಟ್ನಲ್ಲಿ 13000 ಸಾವಿರ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಗೆ ಬಟ್ಲರ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಲಂಕಾಶೈರ್ ಪರ ಕಣಕ್ಕಿಳಿಯುತ್ತಿರುವ ಜೋಸ್ ಬಟ್ಲರ್, ಯಾರ್ಕ್ಶೈರ್ ವಿರುದ್ಧದ ಪಂದ್ಯದಲ್ಲಿ 46 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 77 ರನ್ ಬಾರಿಸಿದ್ದಾರೆ. ಈ ಎಪ್ಪತ್ತೇಳು ರನ್ಗಳೊಂದಿಗೆ ಬಟ್ಲರ್ ಟಿ20 ಕ್ರಿಕೆಟ್ನಲ್ಲಿ 13 ಸಾವಿರ ರನ್ ಪೂರೈಸಿದ್ದಾರೆ.

ಈ ಮೂಲಕ ಟಿ20 ಕ್ರಿಕೆಟ್ನಲ್ಲಿ 13 ಸಾವಿರ ರನ್ ಕಲೆಹಾಕಿದ ಇಂಗ್ಲೆಂಡ್ 2ನೇ ಬ್ಯಾಟರ್ ಹಾಗೂ ವಿಶ್ವದ 7ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಜೋಸ್ ಬಟ್ಲರ್ ತಮ್ಮದಾಗಿಸಿಕೊಂಡಿದ್ದಾರೆ. ಬಟ್ಲರ್ಗೂ ಮುನ್ನ ಇಂಗ್ಲೆಂಡ್ನ ಅಲೆಕ್ಸ್ ಹೇಲ್ಸ್ (13814) ಟಿ20 ಕ್ರಿಕೆಟ್ನಲ್ಲಿ 13 ಸಾವಿರ ರನ್ ಕಲೆಹಾಕಿದ ಸಾಧನೆ ಮಾಡಿದ್ದರು.

ಇದೀಗ 13 ಸಾವಿರ ರನ್ ಕಲೆಹಾಕುವ ಮೂಲಕ ಬಟ್ಲರ್ ಈ ಸಾಧನೆ ಮಾಡಿದ ಇಂಗ್ಲೆಂಡ್ನ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಈವರೆ 432 ಟಿ20 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿರುವ ಬಟ್ಲರ್ 8946 ಎಸೆತಗಳನ್ನು ಎದುರಿಸಿದ್ದು, ಈ ವೇಳೆ 8 ಶತಕ ಹಾಗೂ 93 ಅರ್ಧಶತಕಗಳೊಂದಿಗೆ ಒಟ್ಟು ಜೋಸ್ ಬಟ್ಲರ್ 13055 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್. ಟಿ20 ಕ್ರಿಕೆಟ್ನಲ್ಲಿ 455 ಇನಿಂಗ್ಸ್ ಆಡಿರುವ ಗೇಲ್ 10060 ಎಸೆತಗಳನ್ನು ಎದುರಿಸಿ 14562 ರನ್ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕ್ರಿಸ್ ಗೇಲ್ ನಿರ್ಮಿಸಿದ್ದಾರೆ.
