ಭಲೇ ಬಟ್ಲರ್… ವಿಶ್ವ ದಾಖಲೆ ನಿರ್ಮಿಸಿದ ಜೋಸ್ ಬಟ್ಲರ್

Updated on: Jul 19, 2025 | 11:53 AM

Jos Buttler Records: ಟಿ20 ಕ್ರಿಕೆಟ್​ನಲ್ಲಿ ಜೋಸ್ ಬಟ್ಲರ್ ಹೊಸ ಮೈಲುಗಲ್ಲು ಮುಟ್ಟಿದ್ದಾರೆ. ಅದು ಕೂಡ 13 ಸಾವಿರ ರನ್ ಕಲೆಹಾಕುವ ಮೂಲಕ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವೆಸ್ಟ್ ಇಂಡೀಸ್​ನ ಮಾಜಿ ಆರಂಭಿಕ ಆಟಗಾರ ಕ್ರಿಸ್ ಗೇಲ್.

1 / 5
ಟಿ20 ಕ್ರಿಕೆಟ್​ ಇತಿಹಾಸದಲ್ಲಿ 13 ಸಾವಿರ ರನ್ ಕಲೆಹಾಕಿರುವುದು ಕೇವಲ ಏಳು ಬ್ಯಾಟ್ಸ್​ಮನ್​ಗಳು ಮಾತ್ರ. ಈ ಏಳು ಬ್ಯಾಟರ್​ಗಳಲ್ಲಿ ಕೊನೆಯ ಸ್ಥಾನದಲ್ಲಿರುವುದು ಜೋ ಬಟ್ಲರ್ (Jos Buttler). ಅಂದರೆ ಟಿ20 ಕ್ರಿಕೆಟ್​ನಲ್ಲಿ 13000 ಸಾವಿರ ರನ್ ಕಲೆಹಾಕಿದ ಬ್ಯಾಟರ್​​ಗಳ ಪಟ್ಟಿಗೆ ಬಟ್ಲರ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

2 / 5
ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಟಿ20 ಬ್ಲಾಸ್ಟ್ ಟೂರ್ನಿಯಲ್ಲಿ ಲಂಕಾಶೈರ್ ಪರ ಕಣಕ್ಕಿಳಿಯುತ್ತಿರುವ ಜೋಸ್ ಬಟ್ಲರ್, ಯಾರ್ಕ್​ಶೈರ್ ವಿರುದ್ಧದ ಪಂದ್ಯದಲ್ಲಿ 46 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 77 ರನ್ ಬಾರಿಸಿದ್ದಾರೆ. ಈ ಎಪ್ಪತ್ತೇಳು ರನ್​ಗಳೊಂದಿಗೆ ಬಟ್ಲರ್ ಟಿ20 ಕ್ರಿಕೆಟ್​ನಲ್ಲಿ 13 ಸಾವಿರ ರನ್ ಪೂರೈಸಿದ್ದಾರೆ.

3 / 5
ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 13 ಸಾವಿರ ರನ್ ಕಲೆಹಾಕಿದ ಇಂಗ್ಲೆಂಡ್​ 2ನೇ ಬ್ಯಾಟರ್ ಹಾಗೂ ವಿಶ್ವದ 7ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಜೋಸ್ ಬಟ್ಲರ್ ತಮ್ಮದಾಗಿಸಿಕೊಂಡಿದ್ದಾರೆ. ಬಟ್ಲರ್​ಗೂ ಮುನ್ನ ಇಂಗ್ಲೆಂಡ್​ನ ಅಲೆಕ್ಸ್ ಹೇಲ್ಸ್​ (13814) ಟಿ20 ಕ್ರಿಕೆಟ್​ನಲ್ಲಿ 13 ಸಾವಿರ ರನ್​ ಕಲೆಹಾಕಿದ ಸಾಧನೆ ಮಾಡಿದ್ದರು.

4 / 5
ಇದೀಗ 13 ಸಾವಿರ ರನ್ ಕಲೆಹಾಕುವ ಮೂಲಕ ಬಟ್ಲರ್ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಈವರೆ 432 ಟಿ20 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಬಟ್ಲರ್ 8946 ಎಸೆತಗಳನ್ನು ಎದುರಿಸಿದ್ದು, ಈ ವೇಳೆ 8 ಶತಕ ಹಾಗೂ 93 ಅರ್ಧಶತಕಗಳೊಂದಿಗೆ ಒಟ್ಟು ಜೋಸ್ ಬಟ್ಲರ್ 13055 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 7ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್. ಟಿ20 ಕ್ರಿಕೆಟ್​ನಲ್ಲಿ 455 ಇನಿಂಗ್ಸ್ ಆಡಿರುವ ಗೇಲ್ 10060 ಎಸೆತಗಳನ್ನು ಎದುರಿಸಿ 14562 ರನ್​ಗಳನ್ನು ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ ಗಳಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕ್ರಿಸ್ ಗೇಲ್ ನಿರ್ಮಿಸಿದ್ದಾರೆ.