ಈ ಎರಡು ಭರ್ಜರಿ ದಾಖಲೆಗಳ ಹೊರತಾಗಿಯೂ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋಲನುಭವಿಸಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 19.2 ಓವರ್ಗಳಲ್ಲಿ 166 ರನ್ ಬಾರಿಸಿ 2 ವಿಕೆಟ್ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.