AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಲೇ ಬಟ್ಲರ್… ವಿಶ್ವ ದಾಖಲೆಯೇ ಧೂಳೀಪಟ!

Jos Buttler World Record: ಇಂಗ್ಲೆಂಡ್ ತಂಡದ ಬ್ಯಾಟರ್ ಜೋಸ್ ಬಟ್ಲರ್, ವೆಸ್ಟ್ ಇಂಡೀಸ್‌ನ ದಿಗ್ಗಜ ಕೀರನ್ ಪೊಲಾರ್ಡ್​ ಅವರ ವಿಶ್ವದಾಖಲೆಯನ್ನು ಧೂಳೀಪಟ ಮಾಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:Aug 06, 2026 | 11:11 AM

Share
ಟಿ20 ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ದಾಂಡಿಗ ಜೋಸ್ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೀರನ್ ಪೊಲಾರ್ಡ್  ಹೆಸರಿನಲ್ಲಿದ್ದ ಭರ್ಜರಿ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಬಟ್ಲರ್ ಟಿ20 ರನ್​ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. (PC: Getty Images)

1 / 5

ದಿ ಹಂಡ್ರೆಡ್ ಲೀಗ್​ನ 21ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದ ಜೋಸ್ ಬಟ್ಲರ್ 20 ಎಸೆತಗಳಲ್ಲಿ 51 ರನ್ ಬಾರಿಸಿದ್ದರು. ಈ ಐವತ್ತೊಂದು ರನ್​ಗಳೊಂದಿಗೆ ಬಟ್ಲರ್ ತಮ್ಮ ಟಿ20 ರನ್​ಗಳ ಸಂಖ್ಯೆಯನ್ನು 14833 ಕ್ಕೇರಿಸಿದ್ದಾರೆ. ಈ ಮೂಲಕ ಪೊಲಾರ್ಡ್​ ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದಿದ್ದಾರೆ. (PC: Getty Images)

2 / 5
ಟಿ20 ಕ್ರಿಕೆಟ್​ನಲ್ಲಿ ಈವರೆಗೆ 663 ಇನಿಂಗ್ಸ್ ಆಡಿರುವ ಕೀರನ್ ಪೊಲಾರ್ಡ್ 9802 ಎಸೆತಗಳಲ್ಲಿ 14803 ರನ್ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಬಟ್ಲರ್ ಯಶಸ್ವಿಯಾಗಿದ್ದಾರೆ.

3 / 5
ಚುಟುಕು ಕ್ರಿಕೆಟ್​ನಲ್ಲಿ ಈವರೆಗೆ 492 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 10074 ಎಸೆತಗಳಲ್ಲಿ 14833 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಮೊದಲ  ಸ್ಥಾನಕ್ಕೇರಿದ್ದಾರೆ.  (PC: Getty Images)

4 / 5
ಜೋಸ್ ಬಟ್ಲರ್ ಇನ್ನು 167 ರನ್​ ಕಲೆಹಾಕಿದರೆ, ಟಿ20 ಕ್ರಿಕೆಟ್​ನಲ್ಲಿ 15,000 ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಅತ್ತ ಬಟ್ಲರ್ ಜೊತೆ ಪೊಲಾರ್ಡ್ ಕೂಡ ರೇಸ್​ನಲ್ಲಿದ್ದು, ಹೀಗಾಗಿ ಇವರಿಬ್ಬರಲ್ಲಿ ಯಾರು ಮೊದಲಿಗೆ 15 ಸಾವಿರ ರನ್​ಗಳ ಗಡಿದಾಟಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. (PC: Getty Images)

5 / 5

Published On - 9:26 am, Thu, 6 August 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಓಂಪ್ರಕಾಶ್ ರಾವ್ ನನ್ನ ಗುರುಗಳು: ‘ಪ್ರೇಮದ ಊರಲಿ’ ಡೈರೆಕ್ಟರ್ ಹೆಮ್ಮೆಯ ಮಾತು

ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಇ-ಕೆವೈಸಿ ನೆಪದಲ್ಲಿ ಹಣ ವಸೂಲಿ
ಹನೂರಿನ ಇಂಡಿಗನತ್ತ-ಮೆಂದಾರೆ ಗ್ರಾಮಸ್ಥರ ನರಕಯಾತನೆ

‘ಪ್ರೇಮದ ಊರಲಿ’ ನಟಿಯರಿಗೆ ಕನ್ನಡದ ಬಗ್ಗೆ ಸಂಕಲ್ಪ ಮಾಡಿಸಿದ ರಂಗಾಯಣ ರಘು

ಕೊನೆಗೂ ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಮುಹೂರ್ತ ಫಿಕ್ಸ್

ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪೊಲೀಸ್ ಕಮಿಷನರೇಟ್‌ಗಳಿಗೆ ಸಂಪುಟ ಅನುಮೋದನೆ

ದಸರಾ, ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್​ಸಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ,ಸದಸ್ಯೆ ಗೀತಾ ಇಡಿ ವಶಕ್ಕೆ

ಬಿಗ್​​ಬಾಸ್ ಕನ್ನಡ: ‘ಅಯ್ಯೋ ಉರಿ’ ಕಣ್ಣೀರು ಹಾಕಿದ ಕಿರಣ್ ಶಾಸ್ತ್ರಿ

ನಮ್ಮ್ ಸಿಎಂ ಫೋನ್‌ಗೆ ಸಿಗಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್