
ಟಿ20 ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ದಾಂಡಿಗ ಜೋಸ್ ಬಟ್ಲರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಕೀರನ್ ಪೊಲಾರ್ಡ್ ಹೆಸರಿನಲ್ಲಿದ್ದ ಭರ್ಜರಿ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ. ಈ ದಾಖಲೆಯೊಂದಿಗೆ ಬಟ್ಲರ್ ಟಿ20 ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. (PC: Getty Images)

ದಿ ಹಂಡ್ರೆಡ್ ಲೀಗ್ನ 21ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಕಣಕ್ಕಿಳಿದ ಜೋಸ್ ಬಟ್ಲರ್ 20 ಎಸೆತಗಳಲ್ಲಿ 51 ರನ್ ಬಾರಿಸಿದ್ದರು. ಈ ಐವತ್ತೊಂದು ರನ್ಗಳೊಂದಿಗೆ ಬಟ್ಲರ್ ತಮ್ಮ ಟಿ20 ರನ್ಗಳ ಸಂಖ್ಯೆಯನ್ನು 14833 ಕ್ಕೇರಿಸಿದ್ದಾರೆ. ಈ ಮೂಲಕ ಪೊಲಾರ್ಡ್ ಹೆಸರಿನಲ್ಲಿದ್ದ ವಿಶ್ವ ದಾಖಲೆ ಮುರಿದಿದ್ದಾರೆ. (PC: Getty Images)

ಟಿ20 ಕ್ರಿಕೆಟ್‌ನಲ್ಲಿ ಈವರೆಗೆ 663 ಇನಿಂಗ್ಸ್ ಆಡಿರುವ ಕೀರನ್ ಪೊಲಾರ್ಡ್ 9802 ಎಸೆತಗಳಲ್ಲಿ 14803 ರನ್ ಕಲೆಹಾಕಿದ್ದಾರೆ. ಈ ಮೂಲಕ ಚುಟುಕು ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಬಟ್ಲರ್ ಯಶಸ್ವಿಯಾಗಿದ್ದಾರೆ.

ಚುಟುಕು ಕ್ರಿಕೆಟ್‌ನಲ್ಲಿ ಈವರೆಗೆ 492 ಇನಿಂಗ್ಸ್ ಆಡಿರುವ ಜೋಸ್ ಬಟ್ಲರ್ 10074 ಎಸೆತಗಳಲ್ಲಿ 14833 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. (PC: Getty Images)

ಜೋಸ್ ಬಟ್ಲರ್ ಇನ್ನು 167 ರನ್ ಕಲೆಹಾಕಿದರೆ, ಟಿ20 ಕ್ರಿಕೆಟ್‌ನಲ್ಲಿ 15,000 ರನ್ ಕಲೆಹಾಕಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಅತ್ತ ಬಟ್ಲರ್ ಜೊತೆ ಪೊಲಾರ್ಡ್ ಕೂಡ ರೇಸ್ನಲ್ಲಿದ್ದು, ಹೀಗಾಗಿ ಇವರಿಬ್ಬರಲ್ಲಿ ಯಾರು ಮೊದಲಿಗೆ 15 ಸಾವಿರ ರನ್ಗಳ ಗಡಿದಾಟಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. (PC: Getty Images)
Published On - 9:26 am, Thu, 6 August 26