AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬಟ್ಲರ್: ಮುಂದಿನ ಟಾರ್ಗೆಟ್ ರೋಹಿತ್ ಶರ್ಮಾ

India vs England: ಭಾರತದ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್​ಗಳಲ್ಲಿ 257 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 201 ರನ್​ಗಳಿಸಿ 56 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಜೋಸ್ ಬಟ್ಲರ್ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಆ ದಾಖಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಝಾಹಿರ್ ಯೂಸುಫ್
|

Updated on: Jul 12, 2026 | 10:35 AM

Share
ಇಂಗ್ಲೆಂಡ್ ತಂಡದ ಸ್ಫೋಟಕ ದಾಂಡಿಗ ಜೋಸ್ ಬಟ್ಲರ್ (Jos Buttler) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ಮುಟ್ಟಿದ್ದಾರೆ. ಅದು ಸಹ ಭಾರತದ ದಿಗ್ಗಜ  ವಿರಾಟ್ ಕೊಹ್ಲಿ ಅವರ ಸಾರ್ವಕಾಲಿಕ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: Getty Images)

1 / 5
ದಿ ರೋಸ್ ಬೌಲ್ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಜೋಸ್ ಬಟ್ಲರ್ ಕೇವಲ 64 ಎಸೆತಗಳಲ್ಲಿ 12 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 131 ರನ್ ಚಚ್ಚಿದರು.  ಈ ಭರ್ಜರಿ ಶತಕದೊಂದಿಗೆ ಬಟ್ಲರ್ ಟಿ20 ರನ್ ಸರದಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. (PC: Getty Images)

2 / 5
ಇದಕ್ಕೂ ಮುನ್ನ ಮೂರನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದರು. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 117 ಇನಿಂಗ್ಸ್ ಆಡಿರುವ ಕೊಹ್ಲಿ ಒಟ್ಟು 4,188 ರನ್ ಕಲೆಹಾಕಿದ್ದಾರೆ. ಇದೀಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವಲ್ಲಿ ಬಟ್ಲರ್ ಯಶಸ್ವಿಯಾಗಿದ್ದಾರೆ. (PC: Getty Images)

3 / 5
ಜೋಸ್ ಬಟ್ಲರ್ ಈವರೆಗೆ 147 ಟಿ20 ಅಂತಾರಾಷ್ಟ್ರೀಯ ಇನಿಂಗ್ಸ್ ಆಡಿದ್ದು, ಈ ವೇಳೆ 2828 ಎಸೆತಗಳನ್ನು ಎದುರಿಸಿ ಒಟ್ಟು 4212 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಇಂಟರ್​ನ್ಯಾಷನಲ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. (PC: Getty Images)

4 / 5
ಸದ್ಯ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ರೋಹಿತ್ ಶರ್ಮಾ (4,231 ರನ್). ಹಾಗೆಯೇ ಪಾಕಿಸ್ತಾನದ ಬಾಬರ್ ಆಝಂ (4,596 ರನ್) ಮೊದಲ ಸ್ಥಾನದಲ್ಲಿದ್ದಾರೆ. ಮುಂಬರುವ ಸರಣಿಗಳಲ್ಲಿ ಜೋಸ್ ಬಟ್ಲರ್ 385 ರನ್​ ಕಲೆಹಾಕಿದರೆ ಟಿ20 ಇಂಟರ್​​ನ್ಯಾಷನಲ್​ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. (PC: Getty Images)

5 / 5
Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್

ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ

ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​

ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?

ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ

KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ

ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!

PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್

ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್