AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jos Buttler: ಜೋಸ್ ಸಿಡಿಲಬ್ಬರ: ಬಟ್ಲರ್​ ಈಗ ಸಿಕ್ಸರ್ ಕಿಂಗ್

Jos Buttler Record: ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಪವರ್​ಪ್ಲೇನಲ್ಲಿ ಜೋಶ್ ಬಟ್ಲರ್ ಒಟ್ಟು 85 ರನ್​ ಕಲೆಹಾಕಿದರು. ಇದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಹೊಸ ದಾಖಲೆಯಾಗಿದೆ.

TV9 Web
| Edited By: |

Updated on:Apr 02, 2023 | 5:28 PM

Share
IPL 2023: ಐಪಿಎಲ್​ನ 4ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಜೋಶ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 7
ಅದರಂತೆ ಇನಿಂಗ್ಸ್​ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ಜೋಶ್ ಬಟ್ಲರ್ ಭರ್ಜರಿ ಆರಂಭ ಒದಗಿಸಿದರು. ಅದರಲ್ಲೂ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಜೋಶ್ ಬಟ್ಲರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

2 / 7
ಈ ವೇಳೆ ಬಟ್ಲರ್ ಬ್ಯಾಟ್​ನಿಂದ 7 ಫೋರ್ ಹಾಗೂ 3 ಭರ್ಜರಿ ಸಿಕ್ಸ್​ಗಳು ಮೂಡಿಬಂದಿತ್ತು. ಈ ಮೂರು ಸಿಕ್ಸ್​ಗಳೊಂದಿಗೆ ರಾಜಸ್ಥಾನ್ ರಾಯಲ್ಸ್ ಪರ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.

3 / 7
ಇದಕ್ಕೂ ಮುನ್ನ ಈ ಪಟ್ಟಿಯ 2ನೇ ಸ್ಥಾನದಲ್ಲಿ ಶೇನ್ ವಾಟ್ಸನ್ ಇದ್ದರು. ವಾಟ್ಸನ್ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 109 ಸಿಕ್ಸ್​ಗಳನ್ನು ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಜೋಶ್ ಬಟ್ಲರ್ ಮುರಿದಿದ್ದಾರೆ.

4 / 7
ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 112 ಸಿಕ್ಸ್ ಸಿಡಿಸಿರುವ ಜೋಶ್ ಬಟ್ಲರ್ ಇದೀಗ ಆರ್​ಆರ್ ತಂಡದ ಸಿಕ್ಸರ್​ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಮೊದಲ ಸ್ಥಾನದಲ್ಲಿರುವುದು ತಂಡದ ನಾಯಕ ಸಂಜು ಸ್ಯಾಮ್ಸನ್.

5 / 7
ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದು ಒಟ್ಟು 131 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಆರ್​ಆರ್ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಪವರ್​ಪ್ಲೇನಲ್ಲಿ ಜೋಶ್ ಬಟ್ಲರ್ ಒಟ್ಟು 85 ರನ್​ ಕಲೆಹಾಕಿದರು. ಇದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಹೊಸ ದಾಖಲೆಯಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಮೊದಲ 6 ಓವರ್​ಗಳಲ್ಲಿ 81 ರನ್​ ಕಲೆಹಾಕಿತ್ತು. ಇದೀಗ ಎಸ್​ಆರ್​ಹೆಚ್ ವಿರುದ್ಧ 85 ರನ್ ಬಾರಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತನ್ನದೇ ದಾಖಲೆಯನ್ನು ನವೀಕರಿಸಿದೆ.

7 / 7

Published On - 5:23 pm, Sun, 2 April 23

Follow Us
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?

ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ

ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ

ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ

ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ

ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ

‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ