Jos Buttler: ಜೋಸ್ ಸಿಡಿಲಬ್ಬರ: ಬಟ್ಲರ್ ಈಗ ಸಿಕ್ಸರ್ ಕಿಂಗ್
TV9 Web | Updated By: ಝಾಹಿರ್ ಯೂಸುಫ್
Updated on:
Apr 02, 2023 | 5:28 PM
Jos Buttler Record: ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಪವರ್ಪ್ಲೇನಲ್ಲಿ ಜೋಶ್ ಬಟ್ಲರ್ ಒಟ್ಟು 85 ರನ್ ಕಲೆಹಾಕಿದರು. ಇದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಹೊಸ ದಾಖಲೆಯಾಗಿದೆ.
1 / 7
IPL 2023: ಐಪಿಎಲ್ನ 4ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಜೋಶ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್ಆರ್ಹೆಚ್ ತಂಡವು ಬೌಲಿಂಗ್ ಆಯ್ದುಕೊಂಡಿತು.
2 / 7
ಅದರಂತೆ ಇನಿಂಗ್ಸ್ ಆರಂಭಿಸಿದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಯಶಸ್ವಿ ಜೈಸ್ವಾಲ್ ಹಾಗೂ ಜೋಶ್ ಬಟ್ಲರ್ ಭರ್ಜರಿ ಆರಂಭ ಒದಗಿಸಿದರು. ಅದರಲ್ಲೂ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ಜೋಶ್ ಬಟ್ಲರ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
3 / 7
ಈ ವೇಳೆ ಬಟ್ಲರ್ ಬ್ಯಾಟ್ನಿಂದ 7 ಫೋರ್ ಹಾಗೂ 3 ಭರ್ಜರಿ ಸಿಕ್ಸ್ಗಳು ಮೂಡಿಬಂದಿತ್ತು. ಈ ಮೂರು ಸಿಕ್ಸ್ಗಳೊಂದಿಗೆ ರಾಜಸ್ಥಾನ್ ರಾಯಲ್ಸ್ ಪರ ಅತ್ಯಧಿಕ ಸಿಕ್ಸ್ ಬಾರಿಸಿದ 2ನೇ ಆಟಗಾರ ಎನಿಸಿಕೊಂಡಿದ್ದಾರೆ.
4 / 7
ಇದಕ್ಕೂ ಮುನ್ನ ಈ ಪಟ್ಟಿಯ 2ನೇ ಸ್ಥಾನದಲ್ಲಿ ಶೇನ್ ವಾಟ್ಸನ್ ಇದ್ದರು. ವಾಟ್ಸನ್ ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 109 ಸಿಕ್ಸ್ಗಳನ್ನು ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಜೋಶ್ ಬಟ್ಲರ್ ಮುರಿದಿದ್ದಾರೆ.
5 / 7
ರಾಜಸ್ಥಾನ್ ರಾಯಲ್ಸ್ ಪರ ಒಟ್ಟು 112 ಸಿಕ್ಸ್ ಸಿಡಿಸಿರುವ ಜೋಶ್ ಬಟ್ಲರ್ ಇದೀಗ ಆರ್ಆರ್ ತಂಡದ ಸಿಕ್ಸರ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಇನ್ನು ಮೊದಲ ಸ್ಥಾನದಲ್ಲಿರುವುದು ತಂಡದ ನಾಯಕ ಸಂಜು ಸ್ಯಾಮ್ಸನ್.
6 / 7
ಸಂಜು ಸ್ಯಾಮ್ಸನ್ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದು ಒಟ್ಟು 131 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಆರ್ಆರ್ ತಂಡದ ಪರ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
7 / 7
ಇನ್ನು ಈ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೂಡಿ ಪವರ್ಪ್ಲೇನಲ್ಲಿ ಜೋಶ್ ಬಟ್ಲರ್ ಒಟ್ಟು 85 ರನ್ ಕಲೆಹಾಕಿದರು. ಇದು ಕೂಡ ರಾಜಸ್ಥಾನ್ ರಾಯಲ್ಸ್ ತಂಡದ ಹೊಸ ದಾಖಲೆಯಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ರಾಜಸ್ಥಾನ್ ರಾಯಲ್ಸ್ ಮೊದಲ 6 ಓವರ್ಗಳಲ್ಲಿ 81 ರನ್ ಕಲೆಹಾಕಿತ್ತು. ಇದೀಗ ಎಸ್ಆರ್ಹೆಚ್ ವಿರುದ್ಧ 85 ರನ್ ಬಾರಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತನ್ನದೇ ದಾಖಲೆಯನ್ನು ನವೀಕರಿಸಿದೆ.
Published On - 5:23 pm, Sun, 2 April 23