Josh Brown: ಜೋಶ್ ಅಬ್ಬರಕ್ಕೆ ಕ್ರಿಸ್ ಗೇಲ್ ದಾಖಲೆ ಧೂಳೀಪಟ

BBL 2024: ಈ ಪಂದ್ಯದಲ್ಲಿ ಜೋಶ್ ಬ್ರೌನ್ (140) ಬಾರಿಸಿದ ಶತಕದ ನೆರವಿನಿಂದ ಬ್ರಿಸ್ಬೇನ್ ಹೀಟ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಡಿಲೇಡ್ ಸ್ಟ್ರೈಕರ್ಸ್ ತಂಡವು 19.5 ಓವರ್​ಗಳಲ್ಲಿ 160 ರನ್​ಗಳಿಸಿ ಆಲೌಟ್ ಆಗಿದೆ.

| Updated By: ಝಾಹಿರ್ ಯೂಸುಫ್

Updated on: Jan 23, 2024 | 12:23 PM

ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನ ಚಾಲೆಂಜರ್ ಪಂದ್ಯದಲ್ಲಿ ಸ್ಪೋಟಕ ಶತಕ ಸಿಡಿಸಿ ಜೋಶ್ ಬ್ರೌನ್ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಹೊಡಿಬಡಿ ದಾಂಡಿಗ ಕ್ರಿಸ್ ಗೇಲ್ ಅವರ ಹೆಸರಿನಲ್ಲಿದ್ದ 13 ವರ್ಷಗಳ ಹಳೆಯ ರೆಕಾರ್ಡ್ ಅನ್ನು ಬ್ರೇಕ್ ಮಾಡುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಬ್ರಿಸ್ಬೇನ್ ಹೀಟ್ ತಂಡಕ್ಕೆ ಆರಂಭಿಕ ಆಟಗಾರ ಜೋಶ್ ಬ್ರೌನ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಬ್ರೌನ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

2 / 6
ಈ ಮೂಲಕ ಜೋಶ್ ಬ್ರೌನ್ ಕೇವಲ 41 ಎಸೆತಗಳಲ್ಲಿ ಶತಕ ಪೂರೈಸಿದರು. ಅಂತಿಮವಾಗಿ 57 ಎಸೆತಗಳನ್ನು ಎದುರಿಸಿದ ಬ್ರೌನ್ 12 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 140 ರನ್​ ಕಲೆಹಾಕಿದರು. ಈ 12 ಸಿಕ್ಸ್​ಗಳೊಂದಿಗೆ ಬಿಗ್ ಬ್ಯಾಷ್ ಲೀಗ್​ ಇತಿಹಾಸದಲ್ಲೇ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆಯನ್ನು ಜೋಶ್ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2011ರ ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಥಂಡರ್ ಪರ ಕಣಕ್ಕಿಳಿದಿದ್ದ ಗೇಲ್ ಅಡಿಲೇಡ್ ಸ್ಟ್ರೈಕರ್ಸ್​ ವಿರುದ್ಧ ಬರೋಬ್ಬರಿ 11 ಸಿಕ್ಸ್​ಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು.

4 / 6
ಇದೀಗ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಪರ ಬ್ಯಾಟ್ ಬೀಸಿರುವ ಜೋಶ್ ಬ್ರೌನ್ 12 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಬಿಬಿಎಲ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಬ್ರೌನ್ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಇದಲ್ಲದೆ ಬಿಗ್ ಬ್ಯಾಷ್ ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ 2ನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ಜೋಶ್ ಬ್ರೌನ್ ಬರೆದಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾದ ಕ್ರೇಗ್ ಸಿಮ್ಸನ್. 2014ರಲ್ಲಿ ಪರ್ತ್​ ಸ್ಕಾಚರ್ಸ್​ ಪರ ಆಡಿದ್ದ ಸಿಮನ್ಸ್ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಕೇವಲ 41 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಜೋಶ್ ಬ್ರೌನ್ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

6 / 6
Follow us